ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಮಂಗಳೂರು: ಪಣಂಬೂರು ರಾ.ಹೆ. 66ರಲ್ಲಿ ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು
ಮಂಗಳೂರು:ನ. 15.ಸರಣಿ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಣಂಬೂರು ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಸಿಗ್ನಲ್ ಬಳಿ ಶನಿವಾರ ಬೆಳಿಗ್ಗೆ ನಡೆದಿದೆ.
ಪಣಂಬೂರು ಸಿಗ್ನಲ್ ನಲ್ಲಿ ವಾಹನಗಳು ನಿಂತಿತ್ತು ಎಂದು ಹೇಳಲಾಗಿದೆ. ಎದುರಿನಲ್ಲಿ ಒಂದು ಟ್ಯಾಂಕರ್ ನಿಂತಿದ್ದು, ಅದರ ಹಿಂಭಾಗದಲ್ಲಿ ಆಟೊ ರಿಕ್ಷಾ ನಿಂತಿತ್ತು. ಅದರ ಹಿಂದಿನಿಂದ ಬಂದ ಟ್ಯಾಂಕರ್ ಆಟೋ ರಿಕ್ಷಾಕ್ಕೆ ಡಿಕ್ಕಿಯಾಗಿ ರಿಕ್ಷಾ ಎದುರಿನಲ್ಲಿ ನಿಂತಿದ್ದ ಕಾರಿಗೆ ಅಪ್ಪಳಿಸಿ ಬಳಿಕ ಮುಂದೆ ನಿಂತಿದ್ದ ಮತ್ತೊಂದು ಟ್ಯಾಂಕರ್ ಗೆ ಅಪ್ಪಳಿಸಿದೆ ಎನ್ನಲಾಗಿದೆ.
ಘಟನೆಯಿಂದ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರು ಹಾಗೂ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.