ಎಪ್ರಿಲ್ 25ರ ಶನಿವಾರದ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದ ಪದ್ಮಸರೋವರ ಸ್ವಚತಾ ಕಾರ್ಯಕ್ರಮವು ಸಾಯ೦ಕಾಲ 6ಗ೦ಟೆಯಿ೦ದ ಆರ೦ಭಗೊಳ್ಳಲಿದೆ. ಸಮಾಜಬಾ೦ಧವರು ಹೆಚ್ಚಿನ ಸ೦ಖ್ಯೆಯಲ್ಲಿ ಸ್ವಯ೦ಸೇವಕರಾಗಿ ಭಾಗವಹಿಸಿ ಸಹಕರಿಸುವ೦ತೆ ವಿನ೦ತಿಸಲಾಗಿದೆ.
ಉಡುಪಿ: ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ನ.16ಕ್ಕೆ ಡಯಾಬಿಟೀಸ್ ಮೇಳ-ಡಾ. ಜಿ.ಎಸ್. ಚಂದ್ರಶೇಖರ್
ಉಡುಪಿ: ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ಆದರ್ಶ ಚಾರಿಟೇಬಲ್ ಟ್ರಸ್ಟ್, ಜಿಲ್ಲಾಸ್ಪತ್ರೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೆಕ್ಷಣಾ ಟಕ, ರೆಡ್ಕ್ರಾಸ್ ಸಂಸ್ಥೆ ಸಹಯೋಗದಲ್ಲಿ ‘ಡಯಾಬಿಟೀಸ್ ಮೇಳ’ವನ್ನು ನ.16ರಂದು ಬೆಳಿಗ್ಗೆ 9 ರಿಂದ 4ರವರೆಗೆ ಬೋರ್ಟ್ ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಆದರ್ಶ ಆಸ್ಪತ್ರೆ ಆಡಳಿತ ನಿರ್ದೇಶಕ ಡಾ. ಜಿ.ಎಸ್. ಚಂದ್ರಶೇಖರ್ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಈ ಕಾರ್ಯಕ್ರಮವನ್ನು ಶಾಸಕ ಯಶ್ಪಾಲ್ ಸುವರ್ಣ ಉದ್ಘಾಟಿಸಲಿದ್ದಾರೆ. ಡಿಎಚ್ಒ ಡಾ. ಬಸವರಾಜ ಹುಬ್ಬಳ್ಳಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಅಶೋಕ್, ಸರ್ವೇಕ್ಷಣಾಧಿಕಾರಿ ಡಾ. ನಾಗರತ್ನ , ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ್, ಎಪಿಐ ಅಧ್ಯಕ್ಷ ಡಾ. ಸುರೇಶ್ ಹೆಗ್ಡೆ, ಐಎಂಎ ಅಧ್ಯಕ್ಷ ಡಾ. ಅಶೋಕ್ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
ಮೇಳದಲ್ಲಿ ಮಾದರಿ ಡಯಾಬಿಟೀಸ್ ಪಥ್ಯಾಹಾರ ಪ್ರದರ್ಶನ, ವ್ಯಾಯಾಮ ಮತ್ತು ಯೋಗ ಪ್ರಾತ್ಯಕ್ಷಿಕೆ, ಆದರ್ಶ ದೇಹತೂಕ ಪ್ರಾತ್ಯಕ್ಷಿಕೆ, ಇನ್ಸುಲಿನ್ ಉಪಯೋಗಿಸುವ ಮಾಹಿತಿ, ಡಯಾಬಿಟೀಸ್ ಮತ್ತು ಹೃದ್ರೋಗ ಖಾಯಿಲೆಗಳು, ಡಯಾಬಿಟೀಸ್ ಮತ್ತು ಕಿಡ್ನಿ ತೊಂದರೆಗಳು, ಗ್ಲುಕೋಮೀಟರ್ ಉಪಯೋಗಿಸುವ ವಿಧಾನ ಬಗ್ಗೆ ಮಾಹಿತಿ ನೀಡಲಾಗುವುದು. ಉಚಿತವಾಗಿ ರಕ್ತ ಪರೀಕ್ಷೆ, ಕಿಡ್ನಿ ಪರೀಕ್ಷೆ, ಇಸಿಜಿ, ಕಣ್ಣಿನ ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಆಸ್ಪತ್ರೆ ನಿರ್ದೇಶಕ ಡಾ. ಸುಹಾಸ್ ಜಿ.ಸಿ, ಮ್ಯಾನೇಜರ್ ಡಿಯಾಗೋ ಕ್ವಾಡ್ರಸ್, ಮಾರುಕಟ್ಟೆ ವಿಭಾಗದ ರೋವಿನ್ ಡಿಸೋಜಾ ಉಪಸ್ಥಿತರಿದ್ದರು.