ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಬಜೆಟ್ ನಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿಗೆ 250 ಕೋಟಿ ರೂ. ಅನುದಾನ ಮಂಜೂರಾತಿಗೆ ಸಿಎಂಗೆ ಮನವಿ- ಎಂ.ಎ. ಗಫೂರ್

ಉಡುಪಿ: ರಾಜ್ಯದ ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮ ಸಹಿತ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಕೇರಳ ಹಾಗೂ ಗೋವಾ ಮಾದರಿಯಲ್ಲಿ ಸಿಆರ್ ಝಡ್ ನಿಯಮಾವಳಿಯಲ್ಲಿ ಸಡಿಲಿಕೆ ಮಾಡುವಂತೆ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ಹೇಳಿದರು.

ಉಡುಪಿ ಜಿಲ್ಲಾಧಿಕಾರಿ ಕಚೇರಿಯ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಇಂದು ಕರಾವಳಿ ಅಭಿವೃದ್ಧಿ ಮಂಡಳಿಯ ಸಭೆ ನಡೆಯಿತು. ಬಳಿಕ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಮುಂದಿನ ಬಜೆಟ್ ನಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿಗೆ 250 ಕೋಟಿ ರೂ. ಅನುದಾನ ಮಂಜೂರು ಮಾಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದರು.

ಕಾಪು ತಾಲೂಕಿನ ನಂದಿಕೂರು ಬೆಳಪು ಪ್ರದೇಶದಲ್ಲಿ ಕೆಎಸ್ ಎ ಮೂಲಕ ಅಂತರಾಷ್ಟ್ರೀಯ ಕ್ರೀಡಾಂಗಣ ನಿರ್ಮಿಸುವ ಕುರಿತು ಚರ್ಚೆ ನಡೆಸಲಾಯಿತು. ಇದಕ್ಕೆ ಸಂಬಂಧಿಸಿ ಮಾಸ್ಟರ್ ಪ್ಲ್ಯಾನ್ ರೂಪಿಸಲಾಗುವುದು. ಅಲ್ಲದೆ, ಪ್ರವಾಸೋದ್ಯಮ ಹಾಗೂ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೂಡ ಚರ್ಚೆ ನಡೆಯಿತು. ಕಳೆದ ಬಾರಿ ಕರ್ನಾಟಕ ಕರಾವಳಿ ಅಭಿವೃದ್ಧಿ ಮಂಡಳಿಗೆ ಸರಕಾರದಿಂದ ಬಂದಿರುವ 10.50 ಕೋಟಿ ರೂ. ಅನುದಾನವನ್ನು ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ವ್ಯಾಪ್ತಿಯ 19 ವಿಧಾನಸಭಾ ಕ್ಷೇತ್ರ ಹಾಗೂ ಎರಡು ವಿಧಾನ ಪರಿಷತ್ ಕ್ಷೇತ್ರಗಳಿಗೆ ವಿಂಗಡಿಸಿ, ಕಾಮಗಾರಿಗೆ ಮಂಜೂರಾತಿ ನೀಡಲಾಗಿದೆ‌ ಎಂದು ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಡಿಸಿ ಸ್ವರೂಪ ಟಿಕೆ ಇದ್ದರು.

No Comments

Leave A Comment