ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಹಾಸನ: ಪತಿ- ಅತ್ತೆಯ ನಿರಂತರ ಕಿರುಕುಳ; ಮಗುವಿನ ಜೊತೆ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ
ಹಾಸನ: ಪತಿ ಹಾಗೂ ಅತ್ತೆಯಿಂದ ಕಿರುಕುಳಕ್ಕೆ ಮನನೊಂದು ಗೃಹಿಣಿಯೊಬ್ಬರು ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ರಾಮನಾಥಪುರ ಬಳಿ ನಡೆದಿದೆ.
ಮಹಾದೇವಿ (29) ಆತ್ಮಹತ್ಯೆಗೆ ಶರಣಾದ ಮಹಿಳೆ. ಮಹಾದೇವಿ ಮೂರು ವರ್ಷಗಳ ಹಿಂದೆ ಅರಕಲಗೂಡು ತಾಲೂಕಿನ ಸೀಬಿಹಳ್ಳಿ ಗ್ರಾಮದ ಕುಮಾರ್ ಜೊತೆ ಎರಡನೇ ವಿವಾಹವಾಗಿದ್ದರು.
ಮೊದಲ ಪತಿಯಿಂದ ವಿಚ್ಛೇದನ ಪಡೆದಿದ್ದ ಸಾಲಿಗ್ರಾಮ ತಾಲೂಕಿನ ಕರ್ಪೂರವಳ್ಳಿ ಗ್ರಾಮದ ಮಹಾದೇವಿ ಎರಡನೇ ಮದುವೆ ಸಂದರ್ಭ ಕುಟುಂಬಸ್ಥರು ವರದಕ್ಷಿಣೆ ರೂಪದಲ್ಲಿ 100 ಗ್ರಾಂ ಚಿನ್ನ ನೀಡಿದ್ದರು.
ಆದರೆ ಇತ್ತೀಚಿಗೆ ಪತ್ನಿ ಮೇಲೆ ಅನುಮಾನ ಪಡುತ್ತಿದ್ದ ಕುಮಾರ್, ಅವಾಚ್ಯ ಶಬ್ದಗಳಿಂದ ನಿಂದಿಸಿ ಕಿರುಕುಳ ನೀಡುತ್ತಿದ್ದ. ಕುಮಾರ್ ಕಿರುಕುಳ ತಾಳಲಾರದೆ ಮಹಾದೇವಿ ಕಳೆದ ಹದಿನೈದು ದಿನಗಳ ಹಿಂದೆ ತವರು ಮನೆ ಸೇರಿದ್ದರು.
ಆದರೂ ಸುಮ್ಮನಾಗದ ಪತಿ ಕುಮಾರ್ ಪತ್ನಿಗೆ ಅಶ್ಲೀಲ ಮೆಸೇಜ್ ಮಾಡಿ ಮಾನಸಿಕ ಕಿರುಕುಳ ನೀಡುತ್ತಿದ್ದ. ಹಾಸನಕ್ಕೆ ಬಂದಿದ್ದ ಮಹಾದೇವಿಗೆ ಬಸ್ ನಿಲ್ದಾಣದಲ್ಲೇ ಕುಮಾರ್ ನಿಂದಿಸಿದ್ದ. ಇದರಿಂದ ಮನನೊಂದಿದ್ದ ಮಹಾದೇವಿ ನಂತರ ಹಾಸನ ಮಹಿಳಾ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದರು. ಬಳಿಕ ಡೆತ್‌ನೋಟ್ ಬರೆದಿಟ್ಟು ಮಗುವಿನೊಂದಿಗೆ ವೀಡಿಯೋ ಮಾಡಿ ಮನೆಯಿಂದ ತೆರಳಿದ್ದರು..
ಬಳಿಕ ಕುಟುಂಬಸ್ಥರು ಮಹಾದೇವಿಗಾಗಿ ಎಲ್ಲೆಡೆ ಹುಡುಕಾಟ ನಡೆಸಿದ್ದರು. ಸೋಮವಾರ ಅರಕಲಗೂಡು ತಾಲೂಕಿನ, ಬೆಟ್ಟಸೋಗೆ ಬಳಿ ಮಹಾದೇವಿ ಮೃತದೇಹ ಪತ್ತೆಯಾಗಿದೆ. ಶುಕ್ರವಾರ ರಾಮನಾಥಪುರದ ಬಳಿಯ ಕಾವೇರಿ ನದಿಗೆ ಒಂದೂವರೆ ವರ್ಷದ ಮಗುವಿನೊಂದಿಗೆ ಹಾರಿ ಮಹಾದೇವಿ ಆತ್ಮಹತ್ಯೆಗೆ ಶರಣಾಗಿದ್ದಾರೆ.