ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಆಂಧ್ರಪ್ರದೇಶ: ಅಲ್ಲೂರಿ ಸೀತಾರಾಮರಾಜು ಜಿಲ್ಲೆಯಲ್ಲಿ ಪೊಲೀಸರ ಎನ್‌ಕೌಂಟರ್‌ಗೆ ಆರು ನಕ್ಸಲರು ಸಾವು
ಮಾರೆಡುಮಿಲ್ಲಿ (ಆಂಧ್ರಪ್ರದೇಶ): ಅಲ್ಲೂರಿ ಸೀತಾರಾಮರಾಜು ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಆರು ಮಾವೋವಾದಿಗಳು ಸಾವಿಗೀಡಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಾರೆಡುಮಿಲ್ಲಿ ಮಂಡಲದ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಬೆಳಿಗ್ಗೆ 6.30 ರಿಂದ 7 ಗಂಟೆಯ ನಡುವೆ ಎನ್‌ಕೌಂಟರ್ ನಡೆದಿದೆ ಎಂದು ಅಲ್ಲೂರಿ ಸೀತಾರಾಮರಾಜು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅಮಿತ್ ಬರ್ದಾರ್ ತಿಳಿಸಿದ್ದಾರೆ.
‘ಹೌದು, ಇಂದು (ಮಂಗಳವಾರ) ಅಲ್ಲೂರಿ ಸೀತಾರಾಮರಾಜು ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಆರು ಮಾವೋವಾದಿಗಳು ಸಾವಿಗೀಡಾಗಿದ್ದಾರೆ’ ಎಂದು ಬರ್ದಾರ್ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದರು.
ಎಸ್‌ಪಿ ಪ್ರಕಾರ, ಇದು ಪೊಲೀಸ್ ಇಲಾಖೆಯ ವಿವಿಧ ವಿಭಾಗಗಳು ನಡೆಸಿದ ಜಂಟಿ ಕಾರ್ಯಾಚರಣೆಯಾಗಿದೆ.