ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಚೋದನಕಾರಿ ಭಾಷಣ ಆರೋಪ: ಹಿಂಜಾವೇ ಮುಖಂಡ ರತ್ನಾಕರ್ ಅಮೀನ್ ಬಂಧನ
ಉಡುಪಿ : ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಹಿಂದೂ ಜಾಗರಣಾ ವೇದಿಕೆಯ ಮುಖಂಡನೊಬ್ಬನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಅಜೆಕಾರು ಮರ್ಣೆ ನಡಿಬೆಟ್ಟು ನಿವಾಸಿ ರತ್ನಾಕರ್ ಅಮೀನ್(49) ಬಂಧಿತ ಆರೋಪಿ. ನ.15ರಂದು ಉಡುಪಿ ನಗರದ ಜಟ್ಕಾ ನಿಲ್ದಾಣದ ಬಳಿ ಹಿಂದೂ ಜಾಗರಣಾ ವೇದಿಕೆ ಉಡುಪಿ ವತಿಯಿಂದ ದೆಹಲಿ ಬಾಂಬ್ ಸ್ಪೋಟ ಕೃತ್ಯವನ್ನು ಖಂಡಿಸಿ ಪ್ರತಿಭಟನಾ ಸಭೆಯನ್ನು ಆಯೋಜಿಸಲಾಗಿತ್ತು. ಪ್ರ
ತಿಭಟನೆಯಲ್ಲಿ ರತ್ನಾಕರ ಅಮೀನ್, ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುವಂತಹ ಪ್ರಚೋದನಾಕಾರಿ ಭಾಷಣ ಮಾಡಿದ್ದು, ಈ ಬಗ್ಗೆ ರತ್ನಾಕರ ಅಮೀನ್ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಈ
ಬಗ್ಗೆ ತನಿಖೆ ನಡೆಸಿದ ಉಡುಪಿ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಮಂಜುನಾಥ್ ವಿ.ಬಡಿಗೇರ ನೇತೃತ್ವದ ವಿಶೇಷ ತಂಡವು ಖಚಿತ ಮಾಹಿತಿಯ ಆಧಾರದ ಮೇರೆಗೆ ನ.18ರಂದು ಬೆಳಗ್ಗೆ ಆರೋಪಿ ರತ್ನಾಕರ್ ಮೀನ್‌ನನ್ನು ಮಂಗಳೂರು ಸೆಂಟ್ರಲ್ ರೈಲ್ವೆ ಸ್ಟೇಷನ್ ನಲ್ಲಿ ವಶಕ್ಕೆ ಪಡೆದು ಬಂಧಿಸಿ, ನ್ಯಾಯಲಯಕ್ಕೆ ಹಾಜರು ಪಡಿಸಿದೆ.