ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಮಹಿಳಾ ಕಾಂಗ್ರೆಸ್‌ನ ಸಹಯೋಗದೊಂದಿಗೆ ರೋಶನಿ ಶೆಟ್ಟಿಗೆ ‘ಇಂದಿರಾ ಪ್ರಿಯದರ್ಶಿನಿ’ ಪ್ರಶಸ್ತಿ ಪ್ರದಾನ
ಉಡುಪಿ: ಭಾರತದ ಮಾಜಿ ಪ್ರಧಾನಿ ದಿ. ಇಂದಿರಾಗಾಂಧಿ ಅವರ 108ನೇ ಜನ್ಮದಿನಾಚರಣೆಯನ್ನು ಇಂದು ಬ್ರಹ್ಮಗಿರಿಯಲ್ಲಿರುವ ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್, ಉಡುಪಿ ಬ್ಲಾಕ್ ಕಾಂಗ್ರೆಸ್ ಮತ್ತು ಉಡುಪಿ ಮಹಿಳಾ ಕಾಂಗ್ರೆಸ್‌ನ ಸಹಯೋಗದೊಂದಿಗೆ ನಡೆಸಲಾಯಿತು.
ಇಂದಿರಾ ಗಾಂಧಿಯವರ ನೆನಪಿನಲ್ಲಿ, ಮಹಿಳಾ ಮತ್ತು ಮಕ್ಕಳ ಮಕ್ಕಳ ಅಭಿವೃದ್ಧಿಗೆ ಶ್ರಮಿಸಿದ, ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ರೋಶನಿ ಶೆಟ್ಟಿ ಅಂಪಾರು ಇವರಿಗೆ ‘ಇಂದಿರಾ ಪ್ರಿಯದರ್ಶಿ ಪ್ರಶಸ್ತಿ’ಯನ್ನು ನೀಡಿ ಗೌರವಿಸಲಾಯಿತು.
ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರವನ್ನು ಇದೇ ಸಂದರ್ಭದಲ್ಲಿ ನೀಡಲಾಯಿತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್‌ಕುಮಾರ್ ಕೊಡವೂರು ಪದಾಧಿಕಾರಿಗಳಿಗೆ ಶುಭಹಾರೈಸಿದರು. ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಗೌಡ ಪುಷ್ಪನಮನ ಸಲ್ಲಿಸಿದರು.
ಸರಳಾ ಕಾಂಚನ್, ಗೀತಾ ವಾಗ್ಲೆ, ಸರಸು ಬಂಗೇರ, ಲಕ್ಷ್ಮಿ ಭಟ್, ಮೀನಾಕ್ಷಿ ಮಾಧವ, ಮಾಲಿನಿ ರೈ, ಚಂದ್ರಿಕಾ ಶೆಟ್ಟಿ, ಶಾಂತಲತಾ ಶೆಟ್ಟಿ, ರೇಖಾ ಸುವರ್ಣ, ಅನಿತಾ ಪೂಜಾರಿ, ಸಂಧ್ಯಾ ತಿಲಕ್ ರಾಜ್ ಮಮತಾ ಶೆಟ್ಟಿ, ಇಂಟಕ್ ಜಿಲ್ಲಾ ಅಧ್ಯಕ್ಷ ಕಿರಣ್ ಹೆಗ್ಡೆ, ಸೇವಾದಳದ ಕಿಶೋರ್ ಕುಮಾರ್ ಎರ್ಮಾಳು, ಜಯಕುಮಾರ್, ಶಶೀಧರ ಶೆಟ್ಟಿ ಎಲ್ಲೂರು, ಡಾ ಸುನೀತಾ ಶೆಟ್ಟಿ, ರೋಶನಿ ಒಲಿವವೆರಾ ಮುಂತಾದವರು ಉಪಸ್ಥಿತರಿದ್ದರು.