ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ನಾಯಿ ಕಚ್ಚಿ ಸಾವನ್ನಪ್ಪಿದವರಿಗೆ 5 ಲಕ್ಷ ರೂ.ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ
ಬೆಂಗಳೂರು, ನ.20: ಬೆಂಗಳೂರು ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ದಾಳಿಯಿಂದ ಗಾಯಗೊಂಡ ಅಥವಾ ಸಾವನ್ನಪ್ಪಿದ ಜನರಿಗೆ ಪರಿಹಾರ ಮಾರ್ಗಸೂಚಿಗಳನ್ನು ಪರಿಷ್ಕರಿಸಿ ಕರ್ನಾಟಕ ಸರ್ಕಾರ ನವೀಕರಿಸಿದ ಆದೇಶವನ್ನು ಬಿಡುಗಡೆ ಮಾಡಿದೆ. ನಾಯಿಗಳ ದಾಳಿಯಿಂದ ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆಯನ್ನು ನೀಡಲು ಹಾಗೂ ಸಾವನ್ನಪ್ಪಿದವರ ಮನೆಯ ಆರ್ಥಿಕ ಸಹಾಯಕ್ಕಾಗಿ ಈ ಪರಿಷ್ಕರಣೆ ಮಾಡಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿದೆ.
ನಾಯಿ ಕಚ್ಚಿದ ಗಾಯ, ಮೂಗೇಟುಗಳು ಮತ್ತು ರಕ್ತಸ್ರಾವದ ಸಮಸ್ಯೆ, ಸೀಳುವಿಕೆ, ಇಂತಹ ಗಾಯಗಳು ಕಂಡು ಬಂದರೆ 5 ಸಾವಿರ ರೂ. ವರೆಗೆ ಪರಿಹಾರವನ್ನು ನೀಡಲಾಗುವುದು. 2023ರಲ್ಲಿ ನಾಯಿಗಳ ದಾಳಿಯಿಂದ ಗಾಯಗೊಂಡ ಅಥವಾ ಸಾವನ್ನಪ್ಪಿದವರಿಗೆ ವಿಶೇಷ ಯೋಜನೆಯನ್ನು ಮಾಡಲಾಗಿತ್ತು.ಇದೀಗ ಆ ಯೋಜನೆಯನ್ನೇ ಮುಂದುವರಿಸಲಾಗುವುದು. ಆದರೆ ಇದರಲ್ಲಿ ಕೆಲವೊಂದನ್ನು ಬದಲಾವಣೆ ಮಾಡಲಾಗಿದೆ. ಈ 5,000 ರೂ.ಗಳಲ್ಲಿ 3,500 ರೂ.ಗಳನ್ನು ನಗರಾಭಿವೃದ್ಧಿ ಇಲಾಖೆ ನೀಡುತ್ತದೆ. ಉಳಿದ 1,500 ರೂ. ಅನ್ನು ಆರೋಗ್ಯ ಇಲಾಖೆಯ ಅಡಿಯಲ್ಲಿ ಬರುವ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ಗೆ ವರ್ಗಾಯಿಸಲಾಗುತ್ತದೆ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.
ವಿಶೇಷವಾಗಿ ಖಾಸಗಿ ಆಸ್ಪತ್ರೆಗಳಲ್ಲಿ ನಾಯಿ ಕಚ್ಚಿದ ವ್ಯಕ್ತಿಗೆ ತಕ್ಷಣದ ವೈದ್ಯಕೀಯ ಆರೈಕೆ ಸಿಗುವಂತೆ ನೋಡಿಕೊಳ್ಳುವುದು ಈ ನಿಧಿಯ ಉದ್ದೇಶವಾಗಿದೆ. ಪರಿಹಾರದ ಒಂದು ಭಾಗವನ್ನು ಆರೋಗ್ಯ ಟ್ರಸ್ಟ್‌ಗೆ ನೀಡಲಾಗುವುದು. ಸರ್ಕಾರವು ಆರಂಭಿಕ ಚಿಕಿತ್ಸಾ ವೆಚ್ಚವನ್ನು ಮುಂಗಡವಾಗಿ ಭರಿಸುವ ಯೋಜನೆಯನ್ನು ಕೂಡ ಹೊಂದಿದೆ. ಇದರಿಂದ ಯಾರಿಗೆ ಮುಂಗಡವಾಗಿ ಹಣ ಪಾವತಿ ಮಾಡಲು ಸಾಧ್ಯವಾಗುವುದಿಲ್ಲ, ಅವರಿಗೆ ಸಹಾಯವಾಗುತ್ತದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.
ಇನ್ನು ಬೀದಿ ನಾಯಿ ದಾಳಿಯಿಂದ ಅಥವಾ ರೇಬೀಸ್‌ನಿಂದ ವ್ಯಕ್ತಿ ಸಾವನ್ನಪ್ಪಿದರೆ, ಅವರ ಕುಟುಂಬಕ್ಕೆ 5 ಲಕ್ಷ ರೂ.ಗಳ ಪರಿಹಾರ ನೀಡಲಾಗುವುದು. ಇದರಿಂದ ಆರ್ಥಿಕ ಒತ್ತಡವನ್ನು ಎದುರಿಸುತ್ತಿರುವ ಕುಟುಂಬಗಳಿಗೆ ಸಹಾಯವಾಗುತ್ತದೆ. ನಗರದಲ್ಲಿ ಬೀದಿ ನಾಯಿಗಳ ದಾಳಿಗೆ ಜನರಲ್ಲಿ ಆತಂಕ ಹೆಚ್ಚಾಗಿದೆ. ಅಂತಹ ಘಟನೆಗಳು ನಡೆದಾಗ ತಕ್ಷಣದ ಚಿಕಿತ್ಸೆಯನ್ನು ನೀಡಲು ಈ ಯೋಜನೆಯನ್ನು ಮಾಡಲಾಗಿದೆ. ಈ ಮೂಲಕ ನಾಯಿಗಳ ದಾಳಿಯಿಂದ ಆಗಿರುವ ಗಾಯಗಳಿಗೆ ಸರಿಯಾದ ಚಿಕಿತ್ಸೆ ನೀಡಿ, ಗುಣಮುಖ ಮಾಡುವುದು ಸರ್ಕಾರ ಉದ್ದೇಶವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.