ಬೆಂಗಳೂರು 7 ಕೋಟಿ ರೂ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಪ್ರಕರಣದ ಕಿಂಗ್ಪಿನ್ ಪತ್ನಿ
ಬೆಂಗಳೂರು, ನವೆಂಬರ್ 21: ನಗರದಲ್ಲಿ ನಡೆದಿರುವ 7.11 ಕೋಟಿ ನಗದು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ 5.30 ಕೋಟಿ ರೂ. ಹಣವನ್ನು ಆಂಧ್ರದಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಈಗಾಗಲೇ ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ಕೇಸ್ನ ಕಿಂಗ್ಪಿನ್ ರವಿ ಪತ್ನಿಯನ್ನು ನಿನ್ನೆ ರಾತ್ರಿ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಪ್ರಕರಣದ ಕಿಂಗ್ಪಿನ್ ರವಿ ಪತ್ನಿ ಪೊಲೀಸರ ವಶಕ್ಕೆ
ಪ್ರಕರಣದ ಕಿಂಗ್ಪಿನ್ ರವಿ ಪತ್ನಿಯನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ರವಿ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ಈ ವೇಳೆ ಪತಿ ಕೃತ್ಯದಲ್ಲಿ ಭಾಗಿಯಾಗಿರೋದನ್ನು ರವಿ ಪತ್ನಿ ಒಪ್ಪಿಕೊಂಡಿದ್ದಾರೆ. ನಾನೇ ಪೊಲೀಸ್ ಠಾಣೆಗೆ ಬರಬೇಕು ಎಂದುಕೊಂಡಿದ್ದೆ, ನೀವೇ ಬಂದ್ರಿ ಎಂದು ಪೊಲೀಸರ ಜೊತೆಗೆ ಬಂದಿದ್ದಾರೆ.
ಪತಿ ರವಿ ಬೆಂಗಳೂರಿನಲ್ಲಿ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದರು. ಆದರೆ ಟ್ರಾವೆಲ್ಸ್ ಏಜೆನ್ಸಿಯಲ್ಲಿ ಲಾಸ್ ಆಗಿ ಕೆಲಸ ಇಲ್ಲದೆ ಮನೆಯಲ್ಲಿದ್ದರು. ಈ ವೇಳೆ ಏರಿಯಾದ ಹುಡುಗರನ್ನು ಸೇರಿಸಿಕೊಂಡು ರಾಬರಿಗೆ ಸಂಚು ರೂಪಿಸಿ ಹಣ ದರೋಡೆಗೆ ಪ್ಲ್ಯಾನ್ ಮಾಡಿದ್ದರು. ಸದ್ಯ ರವಿ ಬಗ್ಗೆ ಪತ್ನಿಯಿಂದ ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ.