ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ನನಗೇನು ಗೊತ್ತಿಲ್ಲ, ಏನೇ ಇದ್ದರೂ ತೀರ್ಮಾನ ಹೈಕಮಾಂಡ್ ಮಾಡುತ್ತೇ: ರಾಜ್ಯ ರಾಜಕಾರಣ ಕುರಿತು AICC ಅಧ್ಯಕ್ಷ ಖರ್ಗೆ ಹೇಳಿಕೆ

ಬೆಂಗಳೂರು: ನಾಯಕತ್ವ ಬದಲಾವಣೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಅಲ್ಲದೆ ಅನೇಕ ಶಾಸಕರು ದೆಹಲಿ ಪ್ರವಾಸಕೈಗೊಳ್ಳುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಮೊದಲ ಬಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ರಾಜ್ಯ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಸದ್ಯದ ಬೆಳವಣಿಗೆ ಬಗ್ಗೆ ನಾನು ಏನೂ ಹೇಳಲ್ಲ, ನನ್ನ ಬಳಿ ಹೇಳಲು ಏನೂ ಇಲ್ಲ. ಏನೇ ಇದ್ದರೂ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಈಗ ನಡೆದ ವಿದ್ಯಾಮನಗಳ ಬಗ್ಗೆ ಹೇಳಲು ನನ್ನ ಬಳಿ ಏನೂ ಇಲ್ಲ. ಯಾವ ವಿಚಾರದಲ್ಲಿಯೂ ಹೇಳಲು ಏನೂ ಇಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಆಂತರಿಕ ಕಚ್ಚಾಟದ ಈ ರಾಜಕೀಯ ನಾಟಕಕ್ಕೆ ತೆರೆ ಎಳೆಯಲು ಎಐಸಿಸಿ ಅಧ್ಯಕ್ಷರು ಬಂದು ರಾಜ್ಯ ನಾಯಕರ ಕೋಪವನ್ನು ತಣ್ಣಗಾಗಿಸಲು ಹೆಜ್ಜೆ ಹಾಕಿದ್ದಾರೆ. ಆದರೆ ಬಿಕ್ಕಟ್ಟನ್ನು ನಿಭಾಯಿಸಲು ಮಾರ್ಗ ಅಷ್ಟು ಸುಲಭವಾಗಿರುವಂತೆ ಕಾಣುತ್ತಿಲ್ಲ.

No Comments

Leave A Comment