ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ
ಕಲಬುರಗಿ: ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಮೃತಪಟ್ಟಿದ್ದಾರೆ.
ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಹಾಂತೇಶ್ ಬೀಳಗಿ ಹಾಗೂ ಅವರ ಸಹೋದರರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಇಂದು ಜೇವರ್ಗಿ ಬೈಪಾಸ್ ಬಳಿ ಅಪಘಾತಕ್ಕೀಡಾಗಿದೆ. ಭೀಕರ ಅಪಘಾತದಲ್ಲಿ ಮಹಾಂತೇಶ್ ಬಿಳಗಿ ಅವರ ಸಹೋದರ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಾಂತೇಶ್ ಬೀಳಗಿ ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ಕಾರಿಗೆ ಅಡ್ಡ ಬಂದ ನಾಯಿಯನ್ನು ಉಳಿಸಲು ಹೋಗಿ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.
ಹಿರಿಯ ಐಎಎಸ್ ಅಧಿಕಾರಿಯಾಗಿದ್ದ ಮಹಾಂತೇಶ್ ಬೀಳಗಿ ಅವರು ಬೆಸ್ಕಾಂ ಎಂಡಿ ಆಗಿ, ದಾವಣಗೆರೆ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.
ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.