ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಚಿತ್ರದುರ್ಗದ ಮುರುಘಾ ಶ್ರೀಗೆ ಬಿಗ್ ರಿಲೀಫ್; ಪೋಕ್ಸೋ ಪ್ರಕರಣದಲ್ಲಿ ಖುಲಾಸೆಗೊಳಿಸಿ ಕೋರ್ಟ್ ತೀರ್ಪು
ಚಿತ್ರದುರ್ಗ: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿದ್ದ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರಿಗೆ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ ಬುಧವಾರ ಬಿಗ್ ರಿಲೀಫ್ ನೀಡಿದ್ದು, ಪೋಕ್ಸೋ ಪ್ರಕರಣದಲ್ಲಿ ಶ್ರೀಗಳು ಹಾಗೂ ಇತರ ಆರೋಪಿಗಳನ್ನು ಖುಲಾಸೆಗೊಳಿಸಿ ತೀರ್ಪು ನೀಡಿದೆ.
2022 ಆಗಸ್ಟ್ 31 ರಂದು ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮುರುಘಾ ಶ್ರೀಗಳ ವಿರುದ್ಧ ಪ್ರಕರಣ ದಾಖಲಾಗಿತ್ತು. ಸೆಪ್ಟೆಂಬರ್ 1ರಂದು ಶ್ರೀಗಳ ಬಂಧನವಾಗಿತ್ತು. ಸುಮಾರು 14 ತಿಂಗಳ ಕಾಲ ಜೈಲಿನಲ್ಲಿದ್ದ, ಶ್ರೀಗಳು 2023 ನವೆಂಬರ್ 16ರಂದು ಷರತ್ತು ಬದ್ಧ ಜಾಮೀನಿನ ಮೇಲೆ ಹೊರಗೆ ಬಂದಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್, ಮೊದಲ ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶರಣರು ನಿರ್ದೋಷಿ ಎಂದು ತೀರ್ಪು ಪ್ರಕಟಿಸಿದೆ.
ಪ್ರಕರಣದ ಎರಡನೇ ಆರೋಪಿ ರಶ್ಮಿ ಹಾಗೂ ನಾಲ್ಕನೇ ಆರೋಪಿ ಪರಮಶಿವಯ್ಯ ಅವರನ್ನು ಕೂಡ ನಿರ್ದೋಷಿ ಎಂದು ಕೋರ್ಟ್ ತೀರ್ಪು ನೀಡಿದ್ದು, ಮುರುಘಾಶ್ರೀ ಪರವಾಗಿ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದ್ದರು.
ಮಹತ್ವದ ತೀರ್ಪಿನ ಹಿನ್ನೆಲೆಯಲ್ಲಿ, ಆರೋಪಿ ಸ್ಥಾನದಲ್ಲಿರುವ ಮುರುಘಾ ಶರಣರು ಇಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಅವರೊಂದಿಗೆ ಪ್ರಕರಣದ ಎರಡನೇ ಆರೋಪಿ (ಎ-2) ರಶ್ಮಿ ಹಾಗೂ ನಾಲ್ಕನೇ ಆರೋಪಿ (ಎ-4) ಹಾಗೂ ಮಠದ ಮ್ಯಾನೇಜರ್ ಆಗಿರುವ ಪರಮಶಿವಯ್ಯ ಕೂಡ ಕೋರ್ಟ್‌ಗೆ ಆಗಮಿಸಿದ್ದರು.
ಮಠದ ಹಾಸ್ಟೆಲ್ನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮುರುಘಾಶ್ರೀ, ಲೇಡಿ ವಾರ್ಡನ್ ರಶ್ಮಿ, ಬಸವಾದಿತ್ಯ, ಮ್ಯಾನೇಜರ್ ಪರಮಶಿವಯ್ಯ ಹಾಗೂ ವಕೀಲ ಗಂಗಾಧರಯ್ಯ ವಿರುದ್ಧ ದೂರು ನೀಡಿದ್ದರು.
ಈ ಸಂಬಂಧ ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಮುರುಘಾ ಶ್ರೀ ವಿರುದ್ಧ ಮೊದಲ ಪೋಕ್ಸೋ ಕೇಸ್ ದಾಖಲಾಗಿತ್ತು.