ಭಾರತದ ಪರ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದರು. 120 ಎಸೆತಗಳನ್ನು ಎದುರಿಸಿದ ಕೊಹ್ಲಿ, 7 ಸಿಕ್ಸರ್ ಮತ್ತು 11 ಬೌಂಡರಿಗಳ ಸಹಿತ 135 ರನ್ ಚಚ್ಚಿದರು. ಅವರಿಗೆ ಉತ್ತಮ ಸಾಥ್ ನೀಡಿದ ರೋಹಿತ ಶರ್ಮಾ 51 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 5 ಬೌಂಡರಿಗಳ ಸಹಿತ 57 ರನ್ ಗಳಿಸಿದರು. ಬಳಿಕ ವಿರಾಟ್ ಕೊಹ್ಲಿ ಜೊತೆಗೂಡಿದ ಕೆಎಲ್ ರಾಹುಲ್ ಕೂಡ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿ 3 ಸಿಕ್ಸರ್ 2 ಬೌಂಡರಿಗಳ ನೆರವಿನಿಂದ 60 ರನ್ ಗಳಿಸಿದರೆ, ಅಂತಿಮ ಹಂತದಲ್ಲಿ ಬ್ಯಾಟ್ ಬೀಸಿದ ರವೀಂದ್ರ ಜಡೇಜಾ ಕೂಡ ಕೇವಲ 20 ಎಸೆತಗಳಲ್ಲಿ 1 ಸಿಕ್ಸರ್ 2 ಬೌಂಡರಿ ಸಹಿತ 32 ರನ್ ಪೇರಿಸಿ ತಂಡದ ಬೃಹತ್ ಮೊತ್ತಕ್ಕೆ ಕಾರಣರಾದರು. ದಕ್ಷಿಣ ಆಫ್ರಿಕಾ ಪರ ಮಾರ್ಕೋ ಜೇನ್ಸನ್, ಬರ್ಗರ್, ಬಾಶ್ ಮತ್ತು ಬಾರ್ಟ್ ಮನ್ ತಲಾ 2 ವಿಕೆಟ್ ಪಡೆದರು.