.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........
ಉಡುಪಿ: ಟೆಂಪೋ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು
ಉಡುಪಿ: ನ. 30ಪಡುಬಿದ್ರಿಯಲ್ಲಿ ಟೆಂಪೋ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ 22 ವರ್ಷದ ವಿದ್ಯಾರ್ಥಿನಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಪ್ರೇಕ್ಷಾ ಅವರು ಮಂಗಳೂರು ಕಡೆಗೆ ಹೋಗುವ ಸರ್ವಿಸ್ ರಸ್ತೆಯನ್ನು ದಾಟುತ್ತಿದ್ದಾಗ, ಉಡುಪಿ ಕಡೆಯಿಂದ ಬರುತ್ತಿದ್ದ ಸರಕು ಸಾಗಣೆ ಟೆಂಪೋ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಪ್ರೇಕ್ಷಾ ರಸ್ತೆಗೆ ಬಿದ್ದು ತಲೆಗೆ ತೀವ್ರ ಗಾಯವಾಗಿತ್ತು. ಸ್ಥಳೀಯರು ತಕ್ಷಣ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಿದ ನಂತರ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಕುರಿತು ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರೇಕ್ಷಾ ಅವರು ವಾಮಂಜೂರಿನ ಕರಾವಳಿ ಕಾಲೇಜಿನ ವಿದ್ಯಾರ್ಥಿಯಾಗಿದ್ದರು. ಪರೀಕ್ಷೆ ಮುಗಿಸಿ ಮನೆಗೆ ಹಿಂದಿರುಗುವಾಗ ಈ ಅವಘಡ ಸಂಭವಿಸಿದೆ. ಅತ್ಯಂತ ಬಡ ಕುಟುಂಬಕ್ಕೆ ಸೇರಿದ ಇವರು, ಈ ಹಿಂದೆ ತಮ್ಮ ತಂದೆಯನ್ನು ಕಳೆದುಕೊಂಡಿದ್ದರು. ಪ್ರೇಕ್ಷಾ ಅವರು ತಾಯಿ ಮತ್ತು ಹಿರಿಯ ಸಹೋದರನನ್ನು ಅಗಲಿದ್ದಾರೆ.