ಶೀರೂರು ಮಠದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯಕ್ಕೆ ಭರದ ಸಿದ್ದತೆ…ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ನಾನು ಮಾತು ಕೊಡಲ್ಲ, ಕೊಟ್ರೆ ತಪ್ಪಲ್ಲ: ಸಿಎಂ ಸಿದ್ದರಾಮಯ್ಯ
ಹಾಸನ: ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲಾ ಐದು ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ಯಾವುದಾದರೂ ಕೊಟ್ಟ ಮಾತಿನಂತೆ ನಡೆದುಕೊಂಡ ಸರ್ಕಾರ ಇದ್ದರೆ ಅದು ಕಾಂಗ್ರೆಸ್ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.
ಇಂದು ಹಾಸನದಲ್ಲಿ ಆಯೋಜಿಸಿದ್ದ ರಾಜ್ಯ ಸರ್ಕಾರದ ವಿವಿಧ ಸೇವೆಗಳ ಸಮರ್ಪಣಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಶ್ರವಣಬೆಳಗೊಳದಲ್ಲಿ ಉದ್ಯಾನವನ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ನಾನು ಮಾತು ಕೊಡಲ್ಲ. ಕೊಟ್ಟ ಮೇಲೆ ತಪ್ಪಲ್ಲ. ಮಾಡೇ ಮಾಡ್ತಿವಿ ಎಂದರು.
ಶಕ್ತಿ ಯೋಜನೆ ವೇಸ್ಟ್ ಅಂತಾರೆ. ನಾವು ದಡ್ಡರಲ್ಲ ಒಂದು ಲಕ್ಷ ಕೋಟಿಗೂ ಹೆಚ್ಚು ಹಣ ಖರ್ಚು ಮಾಡುವುದು ಸಮಾನತೆ ತರಲು. ಲೋಕಸಭಾ ಚುನಾವಣೆ ಆದ ಮೇಲೆ ಗ್ಯಾರಂಟಿ ನಿಲ್ಲಿಸುತ್ತಾರೆ ಎಂದು ಹೇಳಿದ್ದರು. ಇದಕ್ಕೆಲ್ಲಾ ಜನರು ನೀವೇ ಉತ್ತರ ಕೊಡಬೇಕು ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಡಿಕೆ ಶಿವಕುಮಾರ್ ಯಾವಾಗಲೂ ಹೇಳುತ್ತಿರುತ್ತಾರೆ, ಟೀಕೆಗಳು ಸಾಯುತ್ತವೆ, ಮಾಡಿರುವ ಕೆಲಸಗಳು ಉಳಿಯುತ್ತವೆ ಎಂದು ಸಿಎಂ ಸಿದ್ದರಾಮಯ್ಯ ಅವರು ಡಿಸಿಎಂ ಹೇಳಿಕೆಯನ್ನು ಉಲ್ಲೇಖಿಸಿ ಅಚ್ಚರಿ ಮೂಡಿಸಿದರು.
ಸಂವಿಧಾನ ಜಾರಿಗೆ ಬಂದು 75 ವರ್ಷ ಕಳೆದರೂ ಸಮಾಜದಲ್ಲಿ ಸಮಾನತೆ ಬಂದಿಲ್ಲ. ಶ್ರೀಮಂತರು ಶ್ರೀಮಂತರಾಗಿಯೇ ಇದ್ದಾರೆ. ಬಡವರು ಬಡವರಾಗಿಯೇ ಉಳಿದಿದ್ದಾರೆ. ಇದನ್ನು ಅರ್ಥ ಮಾಡಿಕೊಂಡಿರುವ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ ಅಸಮಾನತೆ ತೊಡದು ಹಾಕುವ ಪ್ರಯತ್ನ ಮಾಡುತ್ತಿದೆ ಎಂದರು.
ಸಮಾನತೆ, ಭ್ರಾತೃತ್ವ, ಸಮಸಮಾಜ ನಿರ್ಮಾಣ ಮಾಡಬೇಕು. ಎಲ್ಲರಿಗೂ ಸಮಾನ ಅವಕಾಶ, ಸಮಾನ ಹಕ್ಕುಗಳನ್ನು ಕೊಡಬೇಕು ಎಂದು ಅವರು ಹೇಳಿದ್ದರು. ಸಮಾನ ಅವಕಾಶ ಇಲ್ಲದಿದ್ದರೆ, ದೇಶಕ್ಕೆ ಸ್ವಾತಂತ್ರ್ಯ ಬಂದರೂ ಸಾರ್ಥಕವಾಗಲ್ಲ. ಕೇವಲ ರಾಜಕೀಯ ಸ್ವಾತಂತ್ರ್ಯ ಬಂದಲೆ ಸಾಲದು ಎಂದು ಸಿಎಂ ಪ್ರತಿಪಾದಿಸಿದರು.