ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಮಾತನಾಡಿ, ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದವರು ಈಗ “ವಂದೇ ಮಾತರಂ” ಮೌಲ್ಯಗಳ ಬಗ್ಗೆ ಮಾತನಾಡುತ್ತಿದ್ದಾರೆ. ತಮ್ಮ ನಂಬಿಕೆಗಳನ್ನು ಇತರರ ಮೇಲೆ ಹೇರುವ ಸಾಧನವಾಗಿ ರಾಷ್ಟ್ರಗೀತೆಯನ್ನು ಬಳಸಬಾರದು ಎಂದು ಪ್ರತಿಪಾದಿಸಿದರು.
ವಂದೇ ಮಾತರಂ” ಅನ್ನು ಉತ್ಸಾಹದಿಂದ ಅನುಸರಿಸಬೇಕು, ಏಕೆಂದರೆ ಇದು ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಜನರನ್ನು ಬೆಸೆದ ಗೀತೆಯಾಗಿದೆ. “ವಂದೇ ಮಾತರಂ ಪ್ರದರ್ಶಿಸಲು ಅಲ್ಲ, ರಾಜಕೀಯ ಸಾಧನವೂ ಅಲ್ಲ. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದ ವ್ಯಕ್ತಿಗಳು “ವಂದೇ ಮಾತರಂ” ನ ಅರ್ಥವನ್ನು ಹೇಗೆ ಅರ್ಥಮಾಡಿಕೊಳ್ಳಬಲ್ಲರು ಎಂದು ಪ್ರಶ್ನಿಸಿದ್ದಾರೆ.
“ಇಂದು ಒಡಕು ಸೃಷ್ಟಿಸಲು ವಿಭಜಕ ಅಂಶಗಳು ವಂದೇ ಮಾತರಂ ಅನ್ನು ಬಳಸುತ್ತಿವೆ. ಈ ವ್ಯಕ್ತಿಗಳು ಬ್ರಿಟಿಷರು ಬಳಸಿದ ಅದೇ ‘ಒಡೆದು ಆಳುವ’ ನೀತಿಯನ್ನು ಅನುಸರಿಸುತ್ತಿದ್ದಾರೆ” ಎಂದು ಯಾದವ್ ಆರೋಪಿಸಿದರು.