......ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಕರಾವಳಿಕಿರಣ ಡಾಟ್ ಕಾ೦ ವತಿಯಿ೦ದ "ಯುಗಾದಿ" ಹಬ್ಬದ ಹಾರ್ದಿಕ ಶುಭಾಶಯಗಳು......Iran ನಲ್ಲಿ ಕೊನೆಗೂ ಆಡಳಿತ ಬದಲಾವಣೆ! ಅಮೆರಿಕ, ಇಸ್ರೇಲ್ ಬಯಸಿದ್ದೇ ಒಂದು, ಆಗಿದ್ದು ಇನ್ನೊಂದು!

ಮಾಗಡಿ: ಮಾಜಿ ಸಚಿವ ಎಚ್ಎಂ ರೇವಣ್ಣ ಪುತ್ರನ ಕಾರು, ಬೈಕಿಗೆ ಡಿಕ್ಕಿ; ಯುವಕ ಸಾವು

ಮೃತ ರಾಜೇಶ್ – ರೇವಣ್ಣ ಪುತ್ರನ ಕಾರು

ರಾಮನಗರ: ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವ ಹೆಚ್ಎಂ ರೇವಣ್ಣ ಅವರ ಪುತ್ರ ಆರ್. ಶಶಾಂಕ್‌ ಪ್ರಯಾಣಿಸತ್ತಿದ್ದ ಕಾರು ಗುರುವಾರ ತಡ ರಾತ್ರಿ ಬೈಕಿಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಯುವಕ ಸಾವನ್ನಪ್ಪಿದ್ದಾರೆ.

ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕು ಗುಡೇಮಾರನಹಳ್ಳಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದ್ದು, ಘಟನೆ ವೇಳೆ ರೇವಣ್ಣ ಪುತ್ರ ಶಶಾಂಕ್ ಕಾರು ಚಲಾಯಿಸುತ್ತಿದ್ದರು ಎಂದು ಆರೋಪಿಸಲಾಗಿದೆ. ಆದರೆ ಈ ಆರೋಪವನ್ನು ನಿರಾಕರಿಸಿದ ರೇವಣ್ಣ, ನನ್ನ ಪುತ್ರನ ಕಾರು ಅಪಘಾತವಾಗಿದ್ದು ನಿಜ. ಆದರೆ ಚಾಲಕ ಕಾರು ಚಲಾಯಿಸುತ್ತಿದ್ದರು ಎಂದು ಹೇಳಿದ್ದಾರೆ.

ಮಾಗಡಿ ತಾಲೂಕಿನ ಬೆಳಗುಂಬ ಗ್ರಾಮದ ನಿವಾಸಿ ರಾಜೇಶ್(27) ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ, KA 51 MQ 0555 ನಂಬರ್‌ನ ಕಾರು ಡಿಕ್ಕಿಯಾದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಕಾರು ಆರ್. ಶಶಾಂಕ್ ಅವರ ಹೆಸರಿನಲ್ಲಿರುವುದು ದೃಢಪಟ್ಟಿದೆ.

ಈ ಸಂಬಂಧ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾರನ್ನು ಯಾರು ಚಾಲನೆ ಮಾಡುತ್ತಿದ್ದರು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ.

No Comments

Leave A Comment