ಜನವರಿ 9ರ ಶುಕ್ರವಾರದ೦ದು ಶೀರೂರು ಮಠಾಧೀಶರಾದ ಶ್ರೀಶ್ರೀವೇದವರ್ಧನ ತೀರ್ಥ ಶ್ರೀಪಾದರ ಪುರಪ್ರವೇಶ...ಉಡುಪಿ ಶ್ರೀಕೃಷ್ಣಮಠದಲ್ಲಿ ಜನವರಿ 9ರ ಶುಕ್ರವಾರದ೦ದು ಸಪ್ತೋತ್ಸವ ಆರ೦ಭ...
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL ಉದ್ಘಾಟನಾ ಪಂದ್ಯ: ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್
ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಯೇ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಸರ್ಕಾರದ ಹಸಿರು ನಿಶಾನೆ ಅಗತ್ಯವಿತ್ತು. ಮೌಖಿಕ ಒಪ್ಪಿಗೆಯನ್ನು ರಾಜ್ಯ ಸರ್ಕಾರ ಈಗಾಗಲೇ ನೀಡಿದ್ದು, ಶೀಘ್ರದಲ್ಲಿಯೇ ಲಿಖಿತ ಅನುಮತಿ ದೊರೆಯಲಿದೆ ಎಂದು ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ತಿಳಿಸಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ವಿಧಾನಮಂಡಲ ಅಧಿವೇಶನದ ನಂತರ ಗೃಹ ಸಚಿವ ಜಿ.ಪರಮೇಶ್ವರ ಅವರೊಂದಿಗೆ ಚರ್ಚಿಸಲಾಗುವುದು ಎಂದರು.
ಆರ್‌ಸಿಬಿ ಚಾಂಪಿಯನ್ ಆಗಿರುವುದರಿಂದ ತವರು ನೆಲದಲ್ಲಿಯೇ ಉದ್ಘಾಟನಾ ಪಂದ್ಯ ನಡೆಯಬೇಕು. ಆರ್‌ಸಿಬಿ ಸಂಭ್ರಮಾಚರಣೆಯಲ್ಲಿ ಉಂಟಾದ ಕಾಲ್ತುಳಿತ ಪ್ರಕರಣದಿಂದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಂತರರಾಷ್ಟ್ರೀಯ ಹಾಗೂ ಐಪಿಎಲ್ ಪಂದ್ಯಗಳನ್ನು ಮತ್ತೆ ಆಯೋಜಿಸುವ ವಾತಾವರಣ ನಿರ್ಮಿಸುವುದು ಸುಲಭವಿರಲಿಲ್ಲ.
ರಾಜ್ಯ ಸರ್ಕಾರದ ಬೆಂಬಲ ಅಗತ್ಯವಿತ್ತು. ಈ ಬಗ್ಗೆ ಬಿಸಿಸಿಐ ಜೊತೆಯೂ ಮಾತನಾಡಲಾಗಿದೆ ಎಂದು ಹೇಳಿದರು. ಅಗತ್ಯ ಸಿದ್ಧತಾ ಕ್ರಮಗಳನ್ನು ತೆಗೆದುಕೊಂಡು ಉದ್ಘಾಟನಾ ಪಂದ್ಯವನ್ನು ಇಲ್ಲೇ ನಡೆಸಲಾಗುವುದು ಎಂದರು.ಹೊಸ ಕೆಎಸ್‌ಸಿಎ ಪದಾಧಿಕಾರಿಗಳು ಅಧಿಕಾರ ವಹಿಸಿಕೊಂಡ ನಂತರ, ಎಲ್ಲಾ ಸುರಕ್ಷತೆ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರದೊಂದಿಗೆ ಚರ್ಚೆಗಳನ್ನು ಪ್ರಾರಂಭಿಸಲಾಯಿತು. ಈ ನಿಟ್ಟಿನಲ್ಲಿ ಹಸಿರು ನಿಶಾನೆ ತೋರಿಸಲಾಗಿದೆ ಎಂದು ಅವರು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಒಪ್ಪಿಗೆ ನೀಡಿದ್ದಾರೆ ಎಂದು ಪ್ರಸಾದ್ ಹೇಳಿದರು.