.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಶೀರೂರು ಮಠ ಪರ್ಯಾಯ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ…

ಉಡುಪಿ: ಭಾವಿ ಪರ‍್ಯಾಯ ಶೀರೂರು ಮಠದ ಪರ್ಯಾಯ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಕೃಷ್ಣ ಮಠದ ಕನಕನ ಕಿಂಡಿ ಬಳಿ ವಿದ್ವಾಂಸ ಡಾ.ವಸಂತ ಭಾರದ್ವಾಜ್ ಭಾನುವಾರ ಬಿಡುಗಡೆಗೊಳಿಸಿದರು.ಇದೇ ಸಂದರ್ಭದಲ್ಲಿ ಮನೆ ಮನೆಗೆ ಆಹ್ವಾನ ಪತ್ರಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಮಠದ ದಿವಾನ ಡಾ. ಉದಯಕುಮಾರ ಸರಳತ್ತಾಯ ಪ್ರಾರ್ಥನೆ ಸಲ್ಲಿಸಿದರು. ಪರ್ಯಾಯ ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಮಟ್ಟಾರು ರತ್ನಾಕರ ಹೆಗ್ಡೆ, ಕೋಶಾಧಿಕಾರಿ ಜಯಪ್ರಕಾಶ್ ಕೆದ್ಲಾಯ, ಸಂಚಾಲಕ ಬೈಕಾಡಿ ಸುಪ್ರಸಾದ್ ಶೆಟ್ಟಿ, ಜೊತೆ ಕಾರ್ಯದರ್ಶಿಗಳಾದ ಸಂದೀಪ್ ಮಂಜ ಮತ್ತು ಶ್ರೀಕಾಂತ್ ನಾಯಕ್, ಮಹಿಳಾ ಸಮಿತಿ ಸಂಚಾಲಕರಾದ ನಯನಾ ಗಣೇಶ್, ಪದ್ಮಾ, ವೀಣಾ ಎಸ್ ಶೆಟ್ಟಿ, ಪ್ರಮುಖರಾದ ಉದಯಕುಮಾರ್ ಶೆಟ್ಟಿ ಕಿದಿಯೂರು, ಕಿಶನ್ ಹೆಗ್ಡೆ ಕೊಳ್ಕೆಬೈಲು, ಶ್ರೀಕಾಂತ ಉಪಾಧ್ಯಾಯ ಮೊದಲಾದವರಿದ್ದರು.


ಉಡುಪಿ ಜಿಲ್ಲೆಯ ಪ್ರತಿಯೊಂದು ಮನೆಗಳಿಗೂ ಪರ‍್ಯಾಯ ಮಹೋತ್ಸವದ ಆಮಂತ್ರಣ ಪತ್ರಿಕೆ ತಲುಪಬೇಕಾಗಿದ್ದು, ಕೃಷ್ಣ ಭಕ್ತರೇ ತಮ್ಮ ಪರಿಸರದ ಮನೆಗಳಿಗೆ ತಾವೇ ಆಹ್ವಾನ ಪತ್ರಿಕೆ ಕೊಡುವ ಮೂಲಕ ಎಲ್ಲರೂ ಈ ಅಭಿಯಾನದಲ್ಲಿ ಕೈಜೋಡಿಸಿ ಕಾರ‍್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಮಠದ ದಿವಾನ ಡಾ.ಸರಳತ್ತಾಯ ಮನವಿ ಮಾಡಿದರು.

No Comments

Leave A Comment