ಜನವರಿ 9ರ ಶುಕ್ರವಾರದ೦ದು ಶೀರೂರು ಮಠಾಧೀಶರಾದ ಶ್ರೀಶ್ರೀವೇದವರ್ಧನ ತೀರ್ಥ ಶ್ರೀಪಾದರ ಪುರಪ್ರವೇಶ...ಉಡುಪಿ ಶ್ರೀಕೃಷ್ಣಮಠದಲ್ಲಿ ಜನವರಿ 9ರ ಶುಕ್ರವಾರದ೦ದು ಸಪ್ತೋತ್ಸವ ಆರ೦ಭ...

ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಇಂದಿರಾ ಶೇಖ‌ರ್ ಕಲ್ಮಾಡಿ ನಿಧನ

ಉಡುಪಿ: ನಗರಸಭಾ ವ್ಯಾಪ್ತಿಯ ಕಲ್ಮಾಡಿ ವಾರ್ಡ್‌ನಲ್ಲಿ ಬಿಜೆಪಿಯ ಮೊದಲ ನಗರಸಭಾ ಸದಸ್ಯೆಯಾಗಿ, ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆಯಾಗಿದ್ದ ಕಲ್ಮಾಡಿಯ ಇಂದಿರಾ ಶೇಖ‌ರ್ ಅವರು ನಿಧನರಾಗಿದ್ದಾರೆ.

ಇಂದಿರಾ ಶೇಖ‌ರ್ ಅವರು ಸದಾ ಸಮಾಜ ಸೇವಾ ಚಟುವಟಿಕೆಗಳಲ್ಲಿ ನಿರತರಾಗಿ, ಜನಾನುರಾಗಿಯಾಗಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿ ಸೇವೆ ಸಲ್ಲಿಸಿರುವ ಇಂದಿರಾ ಶೇಖ‌ರ್ ಅವರು ಪಕ್ಷ ಸಂಘಟನೆಗೆ ನೀಡಿದ ಕೊಡುಗೆ ಮಹತ್ವಪೂರ್ಣ. ಅವರ ನಿಧನ ಪಕ್ಷಕ್ಕೆ ತುಂಬಲಾರದ ನಷ್ಟವೆನಿಸಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ.

No Comments

Leave A Comment