ಜನವರಿ 9ರ ಶುಕ್ರವಾರದ೦ದು ಶೀರೂರು ಮಠಾಧೀಶರಾದ ಶ್ರೀಶ್ರೀವೇದವರ್ಧನ ತೀರ್ಥ ಶ್ರೀಪಾದರ ಪುರಪ್ರವೇಶ...ಉಡುಪಿ ಶ್ರೀಕೃಷ್ಣಮಠದಲ್ಲಿ ಜನವರಿ 9ರ ಶುಕ್ರವಾರದ೦ದು ಸಪ್ತೋತ್ಸವ ಆರ೦ಭ...
ಬೀದರ್: ಅರಣ್ಯ ಭೂಮಿ ಒತ್ತುವರಿ ಆರೋಪಿಸಿದ್ದಕ್ಕೆ KDP ಸಭೆಯಲ್ಲೇ BJP ಶಾಸಕನ ಕಡೆ ನುಗ್ಗಿದ Congress MLC
ಬೀದರ್: ಕೆಡಿಪಿ ಸಭೆ ಶಾಸಕ ಹಾಗೂ ಪರಿಷತ್ ಸದಸ್ಯರು ಕೈ ಕೈ ಮಿಲಾಯಿಸಿದ್ದಾರೆ. ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಹುಮನಾಬಾದ್ ಕ್ಷೇತ್ರದ ಬಿಜೆಪಿ ಶಾಸಕ ಸಿದ್ದು ಪಾಟೀಲ್ ಹಾಗೂ ಕಾಂಗ್ರೆಸ್ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್ ನಡುವೆ ತೀವ್ರ ವಾಗ್ವಾದ ನಡೆಯಿತು.
ಅರಣ್ಯ ಇಲಾಖೆಯ ಭೂಮಿಯನ್ನು ಭೀಮರಾವ್ ಪಾಟೀಲ್ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಶಾಸಕ ಸಿದ್ದು ಪಾಟೀಲ್ ಆರೋಪಿಸಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆಗೆ ತಿಳಿಸಿದರು. ಇದಕ್ಕೆ ಆಕ್ರೋಶಗೊಂಡ ಭೀಮರಾವ್ ಪಾಟೀಲ್, ಸಭೆಯಲ್ಲೇ ಏಕವಚನ ಬಳಿಸಿ ಶಾಸಕನನ್ನು ನಿಂದಿಸಿದ್ದಲ್ಲೇ ಸಿದ್ದು ಪಾಟೀಲ್ ಬಳಿಗೆ ತೆರಳಿ ಧಮ್ಕಿ ಹಾಕಲು ಮುಂದಾದರು.
ವಾಗ್ವಾದವು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದು ಕೂಡಲೇ ಮಧ್ಯಪ್ರವೇಶಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಬಳಿಕ ಸಚಿವ ಈಶ್ವರ ಖಂಡ್ರೆ ಮಧ್ಯಸ್ಥಿಕೆ ವಹಿಸಿ ಪರಿಸ್ಥಿತಿಯನ್ನು ಶಾಂತಗೊಳಿಸಿದರು.