ಜನವರಿ 9ರ ಶುಕ್ರವಾರದ೦ದು ಶೀರೂರು ಮಠಾಧೀಶರಾದ ಶ್ರೀಶ್ರೀವೇದವರ್ಧನ ತೀರ್ಥ ಶ್ರೀಪಾದರ ಪುರಪ್ರವೇಶ...ಉಡುಪಿ ಶ್ರೀಕೃಷ್ಣಮಠದಲ್ಲಿ ಜನವರಿ 9ರ ಶುಕ್ರವಾರದ೦ದು ಸಪ್ತೋತ್ಸವ ಆರ೦ಭ...

ಕರೂರ್ ಕಾಲ್ತುಳಿತ ಪ್ರಕರಣ: ದಳಪತಿ ವಿಜಯ್ ಗೆ CBI ಶಾಕ್, ಸಮನ್ಸ್ ಜಾರಿ!

ನವದೆಹಲಿ: ಕರೂರ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ದಳಪತಿ ವಿಜಯ್ ಗೆ ಕೇಂದ್ರ ತನಿಖಾ ತಂಡ CBI ಶಾಕ್ ನೀಡಿದೆ. ಜನವರಿ 12 ರಂದು ಕೇಂದ್ರ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕರೂರ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳಗ ವೆಟ್ರಿ ಕಳಗಂ TVK ಅಧ್ಯಕ್ಷ ದಳಪತಿ ವಿಜಯ್ ಹಾಗೂ ಪಕ್ಷದ ಹಲವು ಪದಾಧಿಕಾರಿಗಳನ್ನು ಸಿಬಿಐ ವಿಚಾರಣೆ ನಡೆಸಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ವಿಜಯ್ ಅವರನ್ನು ಕರೆಯಿಸಿ ವಿಚಾರಣೆ ನಡೆಸಲು ಸಿಬಿಐ ನಿರ್ಧರಿಸಿದೆ. ನಂತರ ಈ ವಿಷಯದಲ್ಲಿ ಚಾರ್ಜ್ ಶೀಟ್ ಸಲ್ಲಿಸುವ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ.

ಸುಪ್ರೀಂ ಕೋರ್ಟ್ ಆದೇಶದ ನಂತರ ಸಿಬಿಐ, SIT ಯಿಂದ ಪ್ರಕರಣವನ್ನು ಕೈಗೆತ್ತಿಕೊಂಡಿದೆ.

ಸೆಪ್ಟೆಂಬರ್ 27 ರಂದು ತಮಿಳುನಾಡಿನ ಕರೂರ್ ನಲ್ಲಿ ವಿಜಯ್ ಪಾಲ್ಗೊಂಡಿದ್ದ ರಾಜಕೀಯ ಸಭೆಯಲ್ಲಿ ಉಂಟಾದ ಕಾಲ್ತುಳಿತಕ್ಕೆ ಸಂಬಂಧಿಸಿದ ಸಾಕ್ಷಿಗಳನ್ನು ತನಿಖಾ ಸಂಸ್ಥೆ ಸಂಗ್ರಹಿಸುತ್ತಿದೆ. ಘಟನೆಯಲ್ಲಿ 41 ಮಂದಿ ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

 

No Comments

Leave A Comment