ಜನವರಿ 9ರ ಶುಕ್ರವಾರದ೦ದು ಶೀರೂರು ಮಠಾಧೀಶರಾದ ಶ್ರೀಶ್ರೀವೇದವರ್ಧನ ತೀರ್ಥ ಶ್ರೀಪಾದರ ಪುರಪ್ರವೇಶ...ಉಡುಪಿ ಶ್ರೀಕೃಷ್ಣಮಠದಲ್ಲಿ ಜನವರಿ 9ರ ಶುಕ್ರವಾರದ೦ದು ಸಪ್ತೋತ್ಸವ ಆರ೦ಭ...
ಜ.8ಕ್ಕೆ ಉಡುಪಿ ಶ್ರೀಕೃಷ್ಣ ದೇಗುಲದಲ್ಲಿ ಚಿನ್ನ ಲೇಪಿತ ಭಗವದ್ಗೀತೆ ಪುಸ್ತಕ ಅನಾವರಣ
ಇದೇ ಗುರುವಾರ ಜನವರಿ 8ರಂದು ಉಡುಪಿಯ ಶ್ರೀ ಕೃಷ್ಣ ದೇವಸ್ಥಾನದಲ್ಲಿ ಭಗವದ್ಗೀತೆಯ ಚಿನ್ನದ ಲೇಪಿತ ಆವೃತ್ತಿ ವಿದ್ಯುಕ್ತವಾಗಿ ಅನಾವರಣಗೊಳ್ಳಲಿದೆ. ಇದು ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಮಹತ್ವದ ಕ್ಷಣವನ್ನು ಗುರುತಿಸುತ್ತದೆ.
ವಿಶ್ವಗೀತೆ ಪರ್ಯಾಯ ಖ್ಯಾತಿಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯದ ಬಹುವಿಧ ಕಾರ್ಯಕ್ರಮಗಳಿಗೆ ಶಿಖರಪ್ರಾಯವಾಗಿ ದೆಹಲಿಯ ಶ್ರೀಕೃಷ್ಣ ಭಕ್ತರೊಬ್ಬರು ಸುಮಾರು 2 ಕೋಟಿ ರೂಪಾಯಿ ವೆಚ್ಚದಲ್ಲಿ ಸಿದ್ದಪಡಿಸಿರುವ ಹೊನ್ನಿನ ಭಗವದ್ಗೀತಾ ಹೊತ್ತಿಗೆ ಅಂದು ಸಂಜೆ 5 ಗಂಟೆಗೆ ಶ್ರೀಕೃಷ್ಣ ಸನ್ನಿಧಿಯಲ್ಲಿ ಲೋಕಾರ್ಪಣೆಗೊಳ್ಳಲಿದೆ.
ಭಗವದ್ಗೀತೆಯ 18 ಅಧ್ಯಾಯಗಳ 700 ಶ್ಲೋಕಗಳನ್ನು ಚಿನ್ನದ ಹಾಳೆಯಲ್ಲಿ ಮುದ್ರಿಸಲಾಗಿದೆ. ಹೊನ್ನಿನ ಭಗವದ್ಗೀತೆ ಹೊತ್ತಗೆಯನ್ನು ಚಿನ್ನದ ರಥದಲ್ಲಿಟ್ಟು ರಥಬೀದಿಯಲ್ಲಿ ಮೆರವಣಿಗೆ ಮೂಲಕ ಕೃಷ್ಣ ಸನ್ನಿಧಿಗೆ ತಂದು ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಮತ್ತು ಕಿರಿಯ ಶ್ರೀ ಸುಶೀಂದ್ರತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ರಾಜಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಲೋಕಾರ್ಪಣೆಯಾಗಲಿದೆ.