ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಉಡುಪಿ: ಶ್ರೀಕೃಷ್ಣಮಠದಲ್ಲಿ ಪರ್ಯಾಯ ಪುತ್ತಿಗೆ ಶ್ರೀಗಳಿ೦ದ ಚಿನ್ನದ ಲೇಪಿತ ಭಗವದ್ಗೀತೆ ಲೋಕಾರ್ಪಣೆ

ಉಡುಪಿ: ಗುರುವಾರದ ದಿನವಾದ ಇ೦ದು ಜನವರಿ 8ರಂದು ಉಡುಪಿಯ ಶ್ರೀ ಕೃಷ್ಣ ದೇವಸ್ಥಾನದಲ್ಲಿ ಭಗವದ್ಗೀತೆಯ ಚಿನ್ನದ ಲೇಪಿತ ಆವೃತ್ತಿ ವಿದ್ಯುಕ್ತವಾಗಿ ಅನಾವರಣಗೊಳಿಸಲಾಯಿತು.ಇದು ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಮಹತ್ವದ ಕ್ಷಣವನ್ನು ಗುರುತಿಸುತ್ತದೆ.

ವಿಶ್ವಗೀತೆ ಪರ್ಯಾಯ ಖ್ಯಾತಿಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯದ ಬಹುವಿಧ ಕಾರ್ಯಕ್ರಮಗಳಿಗೆ ಶಿಖರಪ್ರಾಯವಾಗಿ ದೆಹಲಿಯ ಶ್ರೀಕೃಷ್ಣ ಭಕ್ತರೊಬ್ಬರು ಸುಮಾರು 2 ಕೋಟಿ ರೂಪಾಯಿ ವೆಚ್ಚದಲ್ಲಿ ಸಿದ್ದಪಡಿಸಿರುವ ಹೊನ್ನಿನ ಭಗವದ್ಗೀತಾ ಹೊತ್ತಿಗೆ ಸಂಜೆ 5 ಗಂಟೆಗೆ ಶ್ರೀಕೃಷ್ಣ ಸನ್ನಿಧಿಯಲ್ಲಿ ಲೋಕಾರ್ಪಣೆಗೊ೦ಡಿತು.

ಭಗವದ್ಗೀತೆಯ 18 ಅಧ್ಯಾಯಗಳ 700 ಶ್ಲೋಕಗಳನ್ನು ಚಿನ್ನದ ಹಾಳೆಯಲ್ಲಿ ಮುದ್ರಿಸಲಾಗಿದೆ. ಹೊನ್ನಿನ ಭಗವದ್ಗೀತೆ ಹೊತ್ತಗೆಯನ್ನು ಚಿನ್ನದ ಪಾರ್ಥಸಾರಥಿ ರಥದಲ್ಲಿಟ್ಟು ರಥಬೀದಿಯಲ್ಲಿ ಮೆರವಣಿಗೆ ಮೂಲಕ ಕೃಷ್ಣ ಸನ್ನಿಧಿಗೆ ತಂದು ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಮತ್ತು ಕಿರಿಯ ಶ್ರೀ ಸುಶೀಂದ್ರತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ರಾಜಾಂಗಣದಲ್ಲಿ ಸಭಾಕಾರ್ಯಕ್ರಮದಲ್ಲಿ ಲೋಕಾರ್ಪಣೆಗೊ೦ಡಿತು. ಮಠದ ದಿವಾನರಾದ ನಾಗರಾಜ ಆಚಾರ್ಯ,ಅ೦ತರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯ,ವ್ಯವಸ್ಥಾಪಕರಾದ ವಿಷ್ಣುಮೂರ್ತಿ ಉಪಾಧ್ಯಾಯ,ಮಠದ ಕೊಟ್ಟಾರಿಗಳಾದ ರಾಮಚ೦ದ್ರ ಕೊಡ೦ಚಮೊದಲಾದವರು ಉಪಸ್ಥಿತರಿದ್ದರು.ಸಾವಿರಾರುಮ೦ದಿ ಭಕ್ತರು ಹಾಜರಿದ್ದರು.

No Comments

Leave A Comment