37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ....ಮಾರ್ಚ್ 19ರ೦ದು ಚಾ೦ದ್ರಮಾನ ಯುಗಾದಿಯ ದಿನವಾದ ಗುರುವಾರದ೦ದು ಉಡುಪಿ ಶ್ರೀಲಕ್ಷ್ಮೀ ವೆ೦ಕಟರಮಣ ದೇವಸ್ಥಾನದ ಪೂಜಾ ಪರ್ಯಾಯ ಹಸ್ತಾ೦ತರ...

ಉಡುಪಿ ಶ್ರೀಕೃಷ್ಣಮಠದಲ್ಲಿ ಸಂಭ್ರಮದ ಚೂರ್ಣೋತ್ಸವ ಸಂಪನ್ನ…

ಉಡುಪಿ: ಶ್ರೀಕೃಷ್ಣ ಮಠದಲ್ಲಿ ಅದ್ಧೂರಿ ಚೂರ್ಣೋತ್ಸವ (ಹಗಲು ತೇರು) ಗುರುವಾರ ನೆರವೇರುವುದರೊಂದಿಗೆ ವಾರ್ಷಿಕ ಸಪ್ತೋತ್ಸವ ಸಂಪನ್ನಗೊಂಡಿತು.

ರಥಬೀದಿಯಲ್ಲಿ ಸೇರಿದ್ದ ಜನರು ಭಕ್ತಿಪರವಶತೆಯಿಂದ ರಥ ಎಳೆದು ಭಕ್ತಿ ಮೆರೆದರು. ವಿದೇಶಿಯರು ಸೇರಿದಂತೆ ಸಾವಿರಾರು ಮಂದಿ ಹಗಲು ರಥೋತ್ಸವವನ್ನು ಕಣ್ತುಂಬಿಕೊಂಡರು.

ಕೃಷ್ಣನ ಉತ್ಸವ ಮೂರ್ತಿಯನ್ನು ಚಿನ್ನದ ಪಲ್ಲಕ್ಕಿಯಲ್ಲಿ ತಂದು ಬ್ರಹ್ಮರಥದಲ್ಲಿ ಪ್ರತಿಷ್ಠಾಪಿಸಲಾಯಿತು. ಬಳಿಕ ದೇವರಿಗೆ ಪೂಜೆ, ನೈವೇದ್ಯ ಸಮರ್ಪಿಸಿ ಮಹಾ ಮಂಗಳಾರತಿ ನೇರವೇರಿಸಿದ ನಂತರ ಬ್ರಹ್ಮ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಚಂಡೆ, ಮಂಗಳವಾದ್ಯ, ವೇದ ಘೋಷಗಳೊಂದಿಗೆ ಭಕ್ತರ ಜಯಘೋಷ ಮುಗಿಲು ಮುಟ್ಟಿತು.

ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಸ್ವಾಮೀಜಿ ಹಾಗೂ ಕಿರಿಯ ಯತಿ ಸುಶ್ರೀಂದ್ರತೀರ್ಥ ಸ್ವಾಮೀಜಿ ಅವರು ರಥದ ಮೆಟ್ಟಿಲಲ್ಲಿ ನಿಂತು ಪ್ರಸಾದವನ್ನು ಜನರತ್ತ ತೂರಿದರು. ಪ್ರಸಾದಕ್ಕಾಗಿ ಭಕ್ತರು ಮುಗಿಬಿದ್ದರು.

ಬ್ರಹ್ಮರಥವು ರಥಬೀದಿಯಲ್ಲಿ ಒಂದು ಸುತ್ತು ಬಂದ ಬಳಿಕ ಮಧ್ವ ಸರೋವರದಲ್ಲಿ ಕೃಷ್ಣ ಮುಖ್ಯಪ್ರಾಣ, ಉತ್ಸವ ಮೂರ್ತಿಗೆ ಅವಭೃತ ಸ್ನಾನ ನೆರವೇರಿಸಲಾಯಿತು.

ಅದಮಾರು ಮಠದ ಹಿರಿಯ ಯತಿ ವಿಶ್ವಪ್ರಿಯತೀರ್ಥ ಶ್ರೀಪಾದರು, ಪೇಜಾವರ ಮಠ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ಮಠದ ದಿವಾನ ನಾಗರಾಜ ಆಚಾರ್ಯ, ಅಂತರರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನಾಚಾರ್ಯ ಭಾಗವಹಿಸಿದ್ದರು.ಚೂರ್ಣೋತ್ಸವದ ಪ್ರಯುಕ್ತ ಅನ್ನಸಂತರ್ಪಣೆ ನೆರವೇರಿತು. ಸಾವಿರಾರು ಮಂದಿ ಭೋಜನ ಪ್ರಸಾದ ಸ್ವೀಕರಿಸಿದರು.

No Comments

Leave A Comment