ಮಧ್ಯಪಾನವನ್ನು ಬ೦ದ್ ಮಾಡುವ೦ತೆ ಬಹುತೇಕ ಜನರು ಹಾಗೂ ನಮ್ಮ ಕರಾವಳಿ ಕಿರಣ ಡಾಟ್ ಕಾ೦ ಮಾನ್ಯ ಜಿಲ್ಲಾಧಿಕಾರಿ, ಜಿಲ್ಲಾ ಎಸ್ಪಿ ಮತ್ತು ಅಬಕಾರಿ ಎಸ್ಪಿಯವರನ್ನು ವಿನ೦ತಿಸಿದ್ದರ ಪರಿಣಾಮ ಎಣ್ಣೆ ಬ೦ದ್...
RCB ಅಭಿಮಾನಿಗಳಿಗೆ ಸಿಹಿ ಸುದ್ದಿ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL ಪಂದ್ಯ ನಡೆಸಲು ಅನುಮತಿ
ಬೆಂಗಳೂರು: ಆರ್‌ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದ್ದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ಆಯೋಜಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯಗಳನ್ನು ಆಯೋಜಿಸಲು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್(KSCA)ಗೆ ರಾಜ್ಯ ಗೃಹ ಇಲಾಖೆ ಒಪ್ಪಿಗೆ ನೀಡಿದ್ದು ಈ ಮೂಲಕ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಂತರಾಷ್ಟ್ರೀಯ ಮತ್ತು ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ಗ್ರೀನ್ ಸಿಗ್ನಲ್ ಸಿಕ್ಕಂತಾಗಿದೆ.
ನ್ಯಾಯಮೂರ್ತಿ ಕುನ್ಹಾ ವರದಿಯಲ್ಲಿನ ಅಂಶಗಳನ್ನು ಜಾರಿಗೊಳಿಸಿ ಪಂದ್ಯಗಳನ್ನು ನಡೆಸಲು ಒಪ್ಪಿಗೆ ನೀಡಲಾಗಿದೆ. ಸರ್ಕಾರ, ಸಂಬಂಧಿತ ಅಧಿಕಾರಿಗಳು ನಿಗದಿಪಡಿಸಿರುವ ನಿರ್ದಿಷ್ಟ ಷರತ್ತುಗಳು, ನಿಯಮಗಳನ್ನು ಪಾಲಿಸುವ ಷರತ್ತಿನೊಂದಿಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅನುಮತಿ ನೀಡಲಾಗಿದೆ.
ರಾಜ್ಯ ಸರ್ಕಾರದ ಎಲ್ಲಾ ನಿಗದಿತ ಕ್ರಮಗಳನ್ನು ಜಾರಿಗೆ ತರಲು ಕೆಎಸ್‌ಸಿಎ ಸಿದ್ಧವಾಗಿದೆ ಎಂದು ಕೆಎಸ್‌ಸಿಎ ಅಧಿಕೃತ ವಕ್ತಾರ ವಿನಯ್ ಮೃತ್ಯುಂಜಯ ದೃಢಪಡಿಸಿದರು. ಕೆಎಸ್‌ಸಿಎ ಅಧ್ಯಕ್ಷ ಬಿ. ಕೆ. ವೆಂಕಟೇಶ್ ಪ್ರಸಾದ್ ಶೀಘ್ರದಲ್ಲೇ ಪತ್ರಿಕಾಗೋಷ್ಠಿ ನಡೆಸಿ ವಿವರಗಳನ್ನು ಹಂಚಿಕೊಳ್ಳುವ ನಿರೀಕ್ಷೆಯಿದೆ.