ಖ್ಯಾತ ಗಾಯಕಿ ಎಸ್ ಜಾನಕಿಗೆ ಪುತ್ರ ಶೋಕ: ಹಠಾತ್ ಹೃದಯಾಘಾತಕ್ಕೆ ಬಲಿಯಾದ ಮುರಳಿ ಕೃಷ್ಣ!......
ಬೆಂಗಳೂರು ಏರ್ಪೋರ್ಟ್ನಲ್ಲಿ 38.60 ಕೋಟಿ ರೂ ಮೌಲ್ಯದ ಕೊಕೇನ್ ವಶಕ್ಕೆ
ದೇವನಹಳ್ಳಿ: ಜನವರಿ 22: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ 38.60 ಕೋಟಿ ರೂ ಮೌಲ್ಯದ 7.72 ಕೆಜಿ ಕೊಕೇನ್ ವಶಕ್ಕೆ ಪಡೆದುಕೊಂಡಿದ್ದಾರೆ.
ಬ್ರೆಜಿಲ್ನ ಸೌಪಾಲೊ ಏರ್ಪೋರ್ಟ್ನಿಂದ ಕೆಐಎಬಿಗೆ ಬಂದಿದ್ದ ವ್ಯಕ್ತಿ, ಮಕ್ಕಳ ಕಥೆ ಪುಸ್ತಕಗಳ ಮಾದರಿಯಲ್ಲಿ ಡ್ರಗ್ಸ್ ಅಡಗಿಸಿ ಸಾಗಾಟಕ್ಕೆ ಯತ್ನಿಸಿದ್ದಾನೆ. ಅನುಮಾನಗೊಂಡು ಲಗೇಜ್ ಬ್ಯಾಗ್ ಪರಿಶೀಲನೆ ನಡೆಸಿದಾಗ ಡ್ರಗ್ಸ್ ಪತ್ತೆ ಆಗಿದೆ.
ಬ್ರೆಜಿಲ್ನ ಸೌಪಾಲೊ ಏರ್ಪೋರ್ಟ್ನಿಂದ ಕೆಐಎಬಿಗೆ ಬಂದಿದ್ದ ಪ್ರಯಾಣಿಕ ಲಗೇಜ್ ಬ್ಯಾಗ್ನಲ್ಲಿ ಮಕ್ಕಳ ಕಥೆ ಪುಸ್ತಕಗಳ ಬುಕ್ಗಳ ರಟ್ ಅಡಿಯಲ್ಲಿ ಡ್ರಗ್ಸ್ ಇಟ್ಟಿದ್ದ. ಅನುಮಾನಗೊಂಡ ಏರ್ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳು ಲಗೇಜ್ ಬ್ಯಾಗ್ ಪರಿಶೀಲನೆ ನಡೆಸಿದಾಗ ಡ್ರಗ್ಸ್ ಪತ್ತೆ ಆಗಿದೆ.ಇನ್ನು ಡ್ರಗ್ಸ್ ಅಡಗಿಸಿ ಸಾಗಾಟಕ್ಕೆ ಯತ್ನಿಸಿದ್ದ ಪ್ರಯಾಣಿಕನನ್ನು ಇದೀಗ ವಶಕ್ಕೆ ಪಡೆದಿರುವ ಏರ್ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳು ತನಿಖೆ ನಡೆಸಿದ್ದಾರೆ. ಜೊತೆಗೆ 38.60 ಕೋಟಿ ರೂ ಮೌಲ್ಯದ 7.72 ಕೆಜಿ ಕೊಕೇನ್ ವಶಕ್ಕೆ ಪಡೆದುಕೊಂಡಿದ್ದಾರೆ.