....ನಾಡಿನ ಎಲ್ಲೆಡೆಯಲ್ಲಿ ಇ೦ದಿನಿ೦ದ (ಭಾನುವಾರದಿ೦ದ)ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ...16ರ೦ದು ಶ್ರೀಶಾರದಾ ಪೂಜೆ...

ಉಡುಪಿ: ಬಸ್ – ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ 3ವರು ಸಾವು

ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯಾರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಖಾಸಗಿ ಬಸ್​​ ಮತ್ತು ಕ್ರೂಸರ್​ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ ಮತ್ತು 8 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಿಯಾರ್ ಬಳಿಯ ಕಾರ್ಕಳ ಬಜಗೋಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರ ಗುರುತು ಇನ್ನೂ ದೃಢಪಟ್ಟಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದ ರಭಸಕ್ಕೆ ಕ್ರೂಸರ್​​ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಕಾರ್ಕಳ ಠಾಣೆಯ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ಕಾರ್ಕಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

No Comments

Leave A Comment