ಖ್ಯಾತ ಗಾಯಕಿ ಎಸ್ ಜಾನಕಿಗೆ ಪುತ್ರ ಶೋಕ: ಹಠಾತ್ ಹೃದಯಾಘಾತಕ್ಕೆ ಬಲಿಯಾದ ಮುರಳಿ ಕೃಷ್ಣ!......

ಉಡುಪಿ: ಕೋಡಿಬೆಂಗ್ರೆ ಸಮುದ್ರದ ಮಧ್ಯೆ ಪ್ರವಾಸಿ ದೋಣಿ ಮುಳುಗಡೆ ಪ್ರಕರಣ: ಮೈಸೂರು ಮೂಲದಇಬ್ಬರು ಮೃತ್ಯು, ಓರ್ವನ ಸ್ಥಿತಿ ಗಂಭೀರ

ಉಡುಪಿ: ಕೋಡಿಬೇಂಗ್ರೆಯ ಡೆಲ್ಟಾ ಬೀಚ್ ಬಳಿ ಸೋಮವಾರ ಬೆಳಿಗ್ಗೆ ಪ್ರವಾಸಿ ದೋಣಿಯೊಂದು ಸಮುದ್ರ ಮಧ್ಯೆ ಮುಳುಗಡೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರವಾಗಿ ಅಸ್ವಸ್ಥಗೊಂಡ ನಾಲ್ವರ ಪೈಕಿ ಇಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಇನ್ನೋರ್ವ ಸ್ಥಿರವಾಗಿದ್ದಾನೆ.

ಮೈಸೂರು ಮೂಲದ ಶಂಕರಪ್ಪ (22) ಮತ್ತು ಸಿಂಧು (23) ಮೃತ ದುರ್ದೈವಿಗಳು. ದಿಶಾ (26) ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಧರ್ಮರಾಜ್ ( 26) ಎಂಬವರು ಚಿಕಿತ್ಸೆಗೆ ಸ್ಪಂದಿಸಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

ರೆಸಾರ್ಟ್ ರೊಂದರಲ್ಲಿ ಉಳಿದಿದ್ದ 14 ಮಂದಿ ಪ್ರವಾಸಿಗರನ್ನು ವಿಹಾರಕ್ಕೆಂದು ದೋಣಿಯಲ್ಲಿ ಸಮುದ್ರಕ್ಕೆ ಕರೆದುಕೊಂಡು ಹೋಗಲಾಗಿತ್ತು. ಇವರ ಪೈಕಿ ಕೆಲವರು ಲೈಫ್ ಜಾಕೆಟ್ ಧರಿಸಿರಲಿಲ್ಲ. ಸಮುದ್ರ ಮಧ್ಯೆ ದೋಣಿ ಅಕಸ್ಮಿಕವಾಗಿ ಮುಳುಗಿದ್ದು, ಎಲ್ಲ ಪ್ರವಾಸಿಗರು ನೀರಿಗೆ ಬಿದ್ದಿದ್ದಾರೆ. ಇದರಲ್ಲಿ ಹಲವು ಮಂದಿಯನ್ನು ರಕ್ಷಿಸಲಾಗಿದೆ. ಆದರೆ, ನಾಲ್ವರು ತೀವ್ರವಾಗಿ ಅಸ್ವಸ್ಥಗೊಂಡಿದ್ದು, ಇಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಓರ್ವ ಸ್ಥಿತಿ ಗಂಭೀರವಾಗಿದ್ದು, ಇನ್ನೋರ್ವ ಸ್ಥಿತಿ ಗಂಭೀರವಾಗಿದೆ.

No Comments

Leave A Comment