.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........
ಮಂಗಳೂರು: ‘ಹಿಂಸಾತ್ಮಕ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಕಠಿಣ ಕ್ರಮ’- ದಿನೇಶ್ ಗುಂಡೂರಾವ್
ತಮ್ಮ ವೈಯಕ್ತಿಕ ಲಾಭಕ್ಕಾಗಿ ಯುವಕರನ್ನು ದಾರಿ ತಪ್ಪಿಸಿ ಹಿಂಸಾತ್ಮಕ ಚಟುವಟಿಕೆಗಳಲ್ಲಿ ತೊಡಗಲು ಪ್ರೋತ್ಸಾಹಿಸುವುದು ಕಂಡುಬಂದಲ್ಲಿ ಅವುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಯಾವುದೇ ಹಿಂಜರಿಕೆಯನ್ನು ತೋರುವುದಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು.
ನಗರದ ನೆಹರೂ ಮೈದಾನದಲ್ಲಿ ಸೋಮವಾರ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಅವರು ಸಂದೇಶ ನೀಡಿದರು. ಪ್ರತಿಯೊಬ್ಬರೂ ತಮ್ಮ ತಮ್ಮ ಧರ್ಮಗಳ ನೈಜ ಆಶಯಗಳನ್ನು ಪಾಲಿಸುತ್ತಾ, ಇತರ ಧರ್ಮಗಳನ್ನು ಪರಸ್ಪರ ಗೌರವಿಸಿದಲ್ಲಿ ಸಮಾಜದಲ್ಲಿ ಶಾಂತಿ ಹಾಗೂ ಸಾಮರಸ್ಯ ನೆಲೆಸಲಿದೆ. ಶಾಂತಿ ಮತ್ತು ಸಮನ್ವಯತೆ ಸ್ಥಾಪಿತವಾದಲ್ಲಿ ಜಿಲ್ಲೆಯು ಅಭಿವೃದ್ಧಿಗೊಂಡು, ಇಲ್ಲಿನ ಜನರ ಜೀವನಮಟ್ಟವೂ ಸುಧಾರಣೆಯಾಗಲಿದೆ ಎಂದು ಅವರು ಹೇಳಿದರು.
ಸರ್ಕಾರದ ಪ್ರಯತ್ನದಿಂದ ಕಾನೂನು ಮತ್ತು ಸುವ್ಯವಸ್ಥೆ ಸುಧಾರಣೆಯಾಗಿ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಬಲವಾದ ನೆಲೆ ಸಿದ್ಧಗೊಂಡಿದೆ. ಇದರ ಫಲವಾಗಿ ಇಲ್ಲಿನ ಯುವಕರು ಉದ್ಯೋಗಕ್ಕಾಗಿ ಬೇರೆ ರಾಜ್ಯಗಳು ಅಥವಾ ದೇಶಗಳಿಗೆ ವಲಸೆ ಹೋಗುವುದನ್ನು ತಡೆಯಲು ಹಾಗೂ ಸ್ಥಳೀಯವಾಗಿ ಉದ್ಯೋಗಾವಕಾಶಗಳನ್ನು ಸೃಜಿಸಲು ಸಾಧ್ಯವಾಗಲಿದೆ ಎಂದು ಸಚಿವರು ತಿಳಿದರು.