.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಅಜಿತ್ ಪವಾರ್ ಪಂಚಭೂತಗಳಲ್ಲಿ ಲೀನ: ಅಮಿತ್ ಶಾ, ಫಡ್ನವೀಸ್‌ ಭಾಗಿ; ಸಕಲ ಸರ್ಕಾರಿ ಗೌರವದೊಂದಿಗೆ ಭಾವಪೂರ್ಣ ವಿದಾಯ

ಬಾರಾಮತಿ: ವಿಮಾನ ಅಪಘಾತದಲ್ಲಿ ಮೃತಪಟ್ಟ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ಅವರ ಅಂತ್ಯಕ್ರಿಯೆ ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ಪೂರ್ಣ ಸರ್ಕಾರಿ ಗೌರವಗಳೊಂದಿಗೆ ಗುರುವಾರ ನಡೆಯಿತು.

ಅಂತ್ಯಕ್ರಿಯೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಸಿಎಂ ದೇವೆಂದ್ರ ಫಡ್ನವೀಸ್‌, ಶರದ್‌ಪವಾರ್‌ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು.

ಬೆಳಿಗ್ಗೆ 11 ಗಂಟೆ ಸುಮಾರಿಗೆ ಬಾರಾಮತಿಯ ವಿದ್ಯಾ ಪ್ರತಿಷ್ಠಾನದ ಕ್ರೀಡಾ ಮೈದಾನದಲ್ಲಿ ಅಂತ್ಯಸಂಸ್ಕಾರ ನಡೆಸಲಾಯಿತು. ಶಾಸಕರು, ಸಚಿವರು ಅಗಲಿದ ನಾಯಕನಿಗೆ ಅಂತಿಮ ನಮನ ಸಲ್ಲಿಸಿದರು.

ಇಂದು ಬೆಳಿಗ್ಗೆ, ಅಜಿತ್‌ ಪವಾರ್‌ ಅವರ ಪಾರ್ಥಿವ ಶರೀರವನ್ನು ಬಾರಾಮತಿಯ ಪುಣ್ಯಶ್ಲೋಕ್‌ ಅಹಲ್ಯಾದೇವಿ ಆಸ್ಪತ್ರೆಯಿಂದ ಬಾರಾಮತಿಯ ಬಳಿಯ ಅವರ ಕಟೇವಾಡಿ ಗ್ರಾಮಕ್ಕೆ ಕೊಂಡೊಯ್ಯಲಾಯಿತು.

ಅಂತ್ಯಕ್ರಿಯೆಗೂ ಮುನ್ನ ಬಾರಾಮತಿಯಲ್ಲಿ ಮೆರವಣಿಗೆ ನಡೆದಿದ್ದು, ಲಕ್ಷಾಂತರ ಮಂದಿ ಕಣ್ಣೀರ ವಿದಾಯ ಸಲ್ಲಿಸಿದ್ದಾರೆ. ಅಜಿತ್ ಪವಾರ್ ಅಮರ ರಹೇ ಎಂಬ ಘೋಷಣೆಗಳು ಜೋರಾಗಿ ಮೊಳಗಿದ್ದು, ಅನೇಕರು ಕಣ್ಣೀರು ಸುರಿಸುತ್ತಾ ತಮ್ಮ ಪ್ರೀತಿಯ ನಾಯಕನ ಸ್ಮರಿಸಿದರು.

ಅಂತ್ಯಕ್ರಿಯೆಯಲ್ಲಿ ಮಹಾರಾಷ್ಟ್ರ ಸರ್ಕಾರದ ಪೂರ್ಣ ಸರ್ಕಾರಿ ಗೌರವ ನೀಡಲಾಯಿತು. ರಾಜ್ಯ ಸರ್ಕಾರದ ಉನ್ನತ ಅಧಿಕಾರಿಗಳು, ಪೊಲೀಸ್ ಮತ್ತು ಸೇನಾ ಸಿಬ್ಬಂದಿ ಉಪಸ್ಥಿತರಿದ್ದರು. ಮೃತದೇಹವನ್ನು ರಾಷ್ಟ್ರೀಯ ಧ್ವಜದಿಂದ ಸುತ್ತಿ, ಸೇನಾ ಸಿಬ್ಬಂದಿ ಗೌರವ ಸಲ್ಲಿಸಿದರು.

15,000 ಗಂಟೆಗಳ ಹಾರಾಟದ ಅನುಭವ ಹೊಂದಿರುವ ಕ್ಯಾಪ್ಟನ್‌ ಸುಮಿತ್‌ ಕಪೂರ್‌ 1,500 ಗಂಟೆಗಳ ಹಾರಾಟದ ಸಹ-ಪೈಲಟ್‌ ಕ್ಯಾಪ್ಟನ್‌ ಶಾಂಭವಿ ಪಾಠಕ್‌, ವೈಯಕ್ತಿಕ ಭದ್ರತಾ ಅಧಿಕಾರಿ ವಿದೀಪ್‌ ಜಾಧವ್‌ ಮತ್ತು ವಿಮಾನ ಸಹಾಯಕಿ ಪಿಂಕಿ ಮಾಲಿ ಈ ದುರಂತದಲ್ಲಿ ಸಾವನ್ನಪ್ಪಿದ ಇತರರು. ಅವರ ಮೃತದೇಹಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

No Comments

Leave A Comment