Union Budget 2026: 16ನೇ ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಗಳಿಗೆ ಶೇ. 41ರಷ್ಟು ತೆರಿಗೆ ಹಂಚಿಕೆ - ನಿರ್ಮಲಾ ಸೀತಾರಾಮನ್...ಕೇಂದ್ರ ಬಜೆಟ್ 2026: Operation Sindoor ನಂತರ, ಭಯೋತ್ಪಾದಕ ಬೆದರಿಕೆಗಳ ನಡುವೆ ರಕ್ಷಣಾವಲಯಕ್ಕೆ ದಾಖಲೆಯ 6.81 ಲಕ್ಷ ಕೋಟಿ ಮೀಸಲು!...
ಬೇಲೆಕೇರಿ ಅಕ್ರಮ ಅದಿರು ಸಾಗಣೆ ಪ್ರಕರಣ: ತಂದೆ-ಮಗನಿಗೆ ಮೂರು ವರ್ಷ ಕಠಿಣ ಜೈಲು ಶಿಕ್ಷೆ!
ಬೆಂಗಳೂರು: ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದಲ್ಲಿ ಬೇಲೆಕೇರಿ ಬಂದರಿನಿಂದ ಕಬ್ಬಿಣದ ಅದಿರನ್ನು ಅಕ್ರಮವಾಗಿ ಸಾಗಿಸಿದ ಆರೋಪ ಸಾಬೀತಾದ ನಂತರ, ತಂದೆ ಮತ್ತು ಮಗನಿಗೆ ಮೂರು ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 52.30 ಲಕ್ಷ ರೂ. ಮತ್ತು 25,000 ರೂ. ದಂಡ ವಿಧಿಸಲಾಗಿದೆ.
ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಕೆ.ಎಂ. ರಾಧಾಕೃಷ್ಣ ಅವರು. ಎಚ್. ಸಜ್ಜದ್ ವಹಾಬ್ ಅವರ ತಂದೆ ಎಚ್. ಅಬ್ದುಲ್ ವಹಾಬ್ ಹಾಗೂ ಹೊಸಪೇಟೆಯ ಸಮೀರಾ ಟ್ರೇಡಿಂಗ್ ಕಂಪನಿಗೆ ಐಪಿಸಿ ಮತ್ತು ಗಣಿ ಮತ್ತು ಖನಿಜ (ಅಭಿವೃದ್ಧಿ ನಿಯಂತ್ರಣ) ಕಾಯ್ದೆಯಡಿ ಅಪರಾಧಗಳಿಗೆ ಶಿಕ್ಷೆ ವಿಧಿಸಿದ್ದಾರೆ.
ಇಂತಹ ಕಾನೂನುಬಾಹಿರ ಚಟುವಟಿಕೆಗಳು ಪರಿಸರಕ್ಕೆ ಗಂಭೀರ ಅಪಾಯವನ್ನುಂಟುಮಾಡುತ್ತವೆ, ನಾಗರಿಕರು ನೈಸರ್ಗಿಕ ವಿಕೋಪಗಳನ್ನು ಎದುರಿಸುವಂತಾಗುತ್ತದೆ. ದೇಶದ ಆರ್ಥಿಕತೆಯ ಮೇಲೆ ಪರಿಣಾಮ ಬೀರುತ್ತವೆ ಮತ್ತು ಕಠಿಣ ಶಿಕ್ಷೆಯಿಂದ ಅಂತಹ ಅಪರಾಧಗಳನ್ನು ತಡೆಯಬಹುದು ಎಂದು ನ್ಯಾಯಾಧೀಶರು ಅಭಿಪ್ರಾಯ ಪಟ್ಟಿದ್ದಾರೆ.
2009 ಮತ್ತು 2010 ರ ನಡುವೆ 1,923 ಮೆಟ್ರಿಕ್ ಟನ್ ಕದ್ದ ಕಬ್ಬಿಣದ ಅದಿರನ್ನು ತಮ್ಮ ಸ್ಟಾಕ್‌ಯಾರ್ಡ್‌ನಿಂದ ಬೇಲೆಕೇರಿ ಬಂದರಿಗೆ ಅಕ್ರಮವಾಗಿ ಸಾಗಿಸಲಾಗಿತ್ತು. ಈ ವೇಳೆ ವಿವಿಧ ಇಲಾಖೆಗಳ ಅಧಿಕಾರಿಗಳ ಹೆಸರನ್ನು ಕೈಬಿಟ್ಟು ಕೇವಲ ಮೂವರು ಆರೋಪಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದಕ್ಕಾಗಿ ಕರ್ನಾಟಕ ಲೋಕಾಯುಕ್ತದ ವಿಶೇಷ ತನಿಖಾ ತಂಡದ (ಎಸ್‌ಐಟಿ) ನಡವಳಿಕೆ ಬಗ್ಗೆ ನ್ಯಾಯಾಧೀಶ ರಾಧಾಕೃಷ್ಣ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ.
ವಿಚಾರಣೆಯ ಸಮಯದಲ್ಲಿ ಕಸ್ಟಮ್ಸ್ ಇಲಾಖೆಯ ಜಿಎಸ್‌ಟಿ ಸೂಪರಿಂಟೆಂಡೆಂಟ್ ಅವರ ಹೇಳಿಕೆಯನ್ನು ದಾಖಲಿಸಿದ ನ್ಯಾಯಾಧೀಶರು, ಸೇವಾ ಪೂರೈಕೆದಾರರು ಸೇರಿದಂತೆ ಗಣಿ ಮತ್ತು ಭೂವಿಜ್ಞಾನ, ಅರಣ್ಯ, ಕಂದಾಯ, ವಾಣಿಜ್ಯ ತೆರಿಗೆ, ಸಾರಿಗೆ, ಬಂದರು ಮತ್ತು ಕಸ್ಟಮ್ಸ್ ಅಧಿಕಾರಿಗಳ ಅಧಿಕಾರಿಗಳ ‘ಬೆಂಬಲವಿಲ್ಲದೆ ಕಬ್ಬಿಣದ ಅದಿರಿನ ಅಕ್ರಮ ಸಾಗಣೆ ಅಸಾಧ್ಯ ಎಂದು ಹೇಳಿದರು. ಇದೇ ಕಾರಣಕ್ಕೆ ರಾಜ್ಯವು ಕೋಟ್ಯಂತರ ರೂಪಾಯಿಗಳನ್ನು ಕಳೆದುಕೊಳ್ಳುತ್ತಿದೆ ಎಂದು ತಿಳಿಸಿದ್ದಾರೆ
“ನಿಜವಾದ ತಪ್ಪಿತಸ್ಥ ಅಧಿಕಾರಿಗಳು, ಗಣಿಗಾರಿಕೆ ಮಾಲೀಕರು ಮತ್ತು ವ್ಯಾಪಾರಿಗಳನ್ನು ಗುರುತಿಸುವಲ್ಲಿ ಎಸ್‌ಐಟಿ ವಿಫಲವಾಗಿದ್ದು, ನಿರ್ಲಕ್ಷ್ಯ ವಹಿಸಿರುವುದು ದುರದೃಷ್ಟಕರ. ಅಪರಾಧಗಳಲ್ಲಿ ಈ ಇಲಾಖೆಗಳ ಭಾಗಿಯಾಗಿರುವ ಬಗ್ಗೆ ಅಧಿಕಾರಿಗಳು ಏಕೆ ತನಿಖೆ ನಡೆಸುತ್ತಿಲ್ಲ ಎಂದು ನನಗೆ ಅರ್ಥವಾಗುತ್ತಿಲ್ಲ ಎಂದು ನ್ಯಾಯಮೂರ್ತಿಗಳು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
ಅನೇಕ ಪ್ರಕರಣಗಳಲ್ಲಿ ಗಮನಿಸಿದಂತೆ, ಅವರು ಪ್ರಮುಖ ಆರೋಪಿಗಳಿಗೆ ಅನುಮತಿ ನೀಡುತ್ತಿದ್ದರು. ಅಧಿಕೃತ ಅಪರಾಧಿಗಳನ್ನು ಬೆಂಬಲಿಸುತ್ತಿದ್ದರು. ಅಧಿಕಾರಿಗಳೇ ಸಾಕ್ಷ್ಯಗಳನ್ನು ನಾಶಪಡಿಸುತ್ತಿದ್ದರು, ವಿವಿಧ ಕಾರಣಗಳನ್ನು ಹೇಳಿ ತನಿಖೆಯನ್ನು 10 ರಿಂದ 15 ವರ್ಷಗಳ ಕಾಲ ವಿಳಂಬ ಮಾಡುತ್ತಿದ್ದರು ಎಂದು ನ್ಯಾಯಾಧೀಶರು ವಿಷಾದ ವ್ಯಕ್ತ ಪಡಿಸಿದ್ದಾರೆ.