.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........
ಉಡುಪಿ: ಮಾಜಿ ಶಾಸಕ, ಹಿರಿಯ ಧುರೀಣ ಬಸ್ರೂರು ಅಣ್ಣಪ್ಪ ಹೆಗ್ಡೆ ನಿಧನ
ಕುಂದಾಪುರ: ಮಾಜಿ ಶಾಸಕ ರಾಜಕೀಯ, ಧಾರ್ಮಿಕ, ಸಹಕಾರ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಹಿರಿಯ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇಂದು ಶನಿವಾರ ನಿಧನರಾಗಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಅವರು ಕೊನೆಯುಸಿರೆಳೆದರು.
1983-1985 ಅವಧಿಯಲ್ಲಿ ಜನತಾ ಪಕ್ಷದಿಂದ ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದ ಶಾಸಕರಾಗಿದ್ದ ಅಪ್ಪಣ್ಣ ಹೆಗ್ಡೆ ಅವರು ರಾಜಕೀಯ ಜೀವನದಲ್ಲಿ ಜನಸಾಮಾನ್ಯರ ಸಮಸ್ಯೆಗಳಿಗೆ ಧ್ವನಿಯಾಗಿದ್ದು, ಜನಪ್ರತಿನಿಧಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಕೆಗೆ ಹೆಸರುವಾಸಿಯಾಗಿದ್ದರು. ಶಾಸಕರಾಗಿ ಕಾರ್ಯನಿರ್ವಹಿಸಿದ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದರು.
ಧಾರ್ಮಿಕ ಕ್ಷೇತ್ರದಲ್ಲಿಯೂ ಅವರ ಸೇವೆ ಗಣನೀಯವಾಗಿದ್ದು, ಅನೇಕ ದೇವಾಲಯಗಳ ಅಭಿವೃದ್ಧಿ, ಧಾರ್ಮಿಕ ಕಾರ್ಯಕ್ರಮಗಳ ಆಯೋಜನೆ ಹಾಗೂ ಸಂರಕ್ಷಣೆಗೆ ಅವರು ಮುನ್ನಡೆ ನೀಡಿದ್ದರು. ರಾಜಕೀಯ ಹಾಗೂ ನಿಜ ಜೀವನದಲ್ಲಿ ಅಜಾತ ಶತ್ರು ಎನಿಸಿಕೊಂಡಿದ್ದರು.
ಸಾಮಾಜಿಕ ಕ್ಷೇತ್ರಗಳಲ್ಲೂ ತೊಡಗಿಸಿಕೊಂಡಿದ್ದ ಅವರು ತಾಲೂಕು ಕೋ ಅಪರೇಟಿವ್ ಮಾರಾಟ ಸೊಸೈಟಿ ಹಾಗೂ ಭೂ ಅಭಿವೃದ್ಧಿ ಬ್ಯಾಂಕ್ ಉಪಾಧ್ಯಕ್ಷರಾಗಿ, ಬನ್ನೂರು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ, ಬನ್ನೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಖ್ಯಸ್ಥರಾಗಿ, ಕೊಲ್ಲೂರು ಮೂಕಾಂಬಿಕಾ ದೇವಳದ ಅಧ್ಯಕ್ಷರಾಗಿ ಕೂಡ ಸೇವೆ ಸಲ್ಲಿಸಿದ್ದಾರೆ.ಮೃತರು ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.