.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........
ಬೆಂಗಳೂರು ವಿಮಾನ ನಿಲ್ದಾಣದಲ್ಲಿ 3 ಕೋಟಿ. ರೂ ಮೌಲ್ಯದ ಗಾಂಜಾ ಪತ್ತೆ- ಮೂವರು ಅರೆಸ್ಟ್
ಬೆಂಗಳೂರು:ಫೆ. 07.ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ವಿದೇಶದಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 2.97 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಆರೋಪಿಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಥಾಯ್ಲೆಂಡ್‌ನ ಪುಕೆಟ್ ಹಾಗೂ ಮಲೇಶಿಯಾದಿಂದ ಕೆಐಎಬಿಗೆ ಆಗಮಿಸಿದ್ದ ಮೂವರು ಪ್ರಯಾಣಿಕರ ಲಗೇಜ್ ಬ್ಯಾಗ್‌ಗಳನ್ನು ಇಮಿಗ್ರೇಷನ್ ವಿಭಾಗದಲ್ಲಿ ಪರಿಶೀಲಿಸಿದ ವೇಳೆ, ಪ್ಯಾಕೆಟ್‌ಗಳಾಗಿ ಅಡಗಿಸಿಟ್ಟಿದ್ದ ಒಟ್ಟು 8.5 ಕೆಜಿ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ. ವಶಪಡಿಸಿಕೊಳ್ಳಲಾದ ಮಾದಕ ವಸ್ತುವಿನ ಮೌಲ್ಯವನ್ನು ಸುಮಾರು 2.97 ಕೋಟಿ ರೂ. ಎಂದು ಅಂದಾಜಿಸಲಾಗಿದೆ.
ಗಾಂಜಾ ಸಮೇತ ಆರೋಪಿಗಳನ್ನು ವಶಕ್ಕೆ ಪಡೆದಿರುವ ಕಸ್ಟಮ್ಸ್ ಅಧಿಕಾರಿಗಳು, ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.