......ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಕರಾವಳಿಕಿರಣ ಡಾಟ್ ಕಾ೦ ವತಿಯಿ೦ದ "ಯುಗಾದಿ" ಹಬ್ಬದ ಹಾರ್ದಿಕ ಶುಭಾಶಯಗಳು......ಶತ್ರು ಸಂಪರ್ಕಿತ ಹಡಗುಗಳನ್ನು ಬಿಟ್ಟು ಎಲ್ಲರಿಗೂ ಹಾರ್ಮುಝ್ ಜಲಸಂಧಿ ಮುಕ್ತ: ಇರಾನ್...
ಬೆಂಗಳೂರಿನಲ್ಲಿ ದಾರುಣ ಘಟನೆ: ಶಾಲಾ ಬಸ್ ಹರಿದು ತಂದೆಯ ಕಣ್ಣೆದುರೇ ವಿಲವಿಲ ಒದ್ದಾಡಿ ಪ್ರಾಣಬಿಟ್ಟ ಕಂದಮ್ಮಗಳು!
ಬೆಂಗಳೂರು: ಬೆಂಗಳೂರಿನಲ್ಲಿ ಬೈಕ್ ಗೆ ಶಾಲಾ ಬಸ್ ವೊಂದು ಡಿಕ್ಕಿ ಹೊಡೆದಿದ್ದರಿಂದ ಕೆಳಗೆ ಬಿದ್ದ ಮಕ್ಕಳ ಮೇಲೆ ಬಸ್ ಹರಿದ ಪರಿಣಾಮ ಇಬ್ಬರು ಮಕ್ಕಳ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮೃತ ಮಕ್ಕಳನ್ನು 2 ವರ್ಷದ ವರ್ಷಾ ಹಾಗೂ 4 ವರ್ಷದ ಭಾನು ಎಂದು ಗುರುತಿಸಲಾಗಿದೆ. ಹೆಣ್ಣೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಥಣಿಸಂದ್ರದ ಪೊಲೀಸ್ ಕ್ವಾರ್ಟರ್ಸ್ ಬಳಿ ಪೊಲೀಸ್ ಪೇದೆ ನಾಗನಗೌಡ ತನ್ನ ಮಗಳು ವರ್ಷಾ ಹಾಗೂ ಅಣ್ಣನ ಮಗಳು ಭಾನುಳನ್ನು ಬೈಕ್ ನಲ್ಲಿ ಕೂರಿಸಿಕೊಂಡು ಹೋಗುತ್ತಿದ್ದಾಗ ಅಜ್ ಮೋನಿ ಶಾಲೆಗೆ ಸೇರಿದ ಬಸ್ ಟರ್ನ್ ತೆಗೆದುಕೊಳ್ಳುವಾಗ ಅಜಾಗರೂಕತೆಯಿಂದ ಬೈಕ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಬಸ್ ಹರಿದು ಗಂಭೀರವಾಗಿ ಗಾಯಗೊಂಡಿದ್ದ ಮಕ್ಕಳ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತ ಸುದ್ದಿ ತಿಳಿಯುತ್ತಿದ್ದಂತೆಯೇ ಉತ್ತರ ವಿಭಾಗದ ಸಂಚಾರ ಡಿಸಿಪಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೆಣ್ಣೂರು ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಶಾಲಾ ಬಸ್ ಚಾಲಕನನ್ನು ಬಂಧಿಸಲಾಗಿದೆ.