.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ರೌಡಿ ಶೀಟರ್ ಬಿಕ್ಲು ಶಿವು ಕೊಲೆ ಪ್ರಕರಣ: ಏರ್ ಪೋರ್ಟ್ ನಲ್ಲಿ ಬಿಜೆಪಿ MLA ಬೈರತಿ ಬಸವರಾಜ್ ಬಂಧನ

ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಅಲಿಯಾಸ್ ವಿ.ಜಿ.ಶಿವಪ್ರಕಾಶ್ ಕೊಲೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಇದೀಗ ಶಾಸಕ ಭೈರತಿ ಬಸವರಾಜ್​ನ್ನು ದೇವನಹಳ್ಳಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಭೈರತಿ ಬಸವರಾಜ್ ಕೆಲ ದಿನಗಳ ಹಿಂದೆಯೇ ಮೊಬೈಲ್ ಸ್ವಿಚ್ ಆಫ್ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿತ್ತು. ಆದರೆ ಇಂದು ಸಂಜೆ ಅವರು ಅಹಮದಾಬಾದ್‌ನಿಂದ ಬೆಂಗಳೂರಿಗೆ ಆಗಮಿಸುತ್ತಿರುವ ಬಗ್ಗೆ ಸಿಐಡಿ ಅಧಿಕಾರಿಗಳಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಅದರಂತೆ ಸಿಐಡಿಯ ವಿಶೇಷ ತಂಡ ವಿಮಾನ ನಿಲ್ದಾಣಕ್ಕೆ ಲಗ್ಗೆ ಇಟ್ಟಿತ್ತು.

ಅಹಮದಾಬಾದ್‌ನಿಂದ ಹೊರಟಿದ್ದ ಇಂಡಿಗೋ ವಿಮಾನ (6E683) ಸಂಜೆ 7 ಗಂಟೆಯ ಸುಮಾರಿಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುತ್ತಿದ್ದಂತೆಯೇ ಸ್ಥಳದಲ್ಲಿದ್ದ ಸಿಐಡಿ ಅಧಿಕಾರಿಗಳು, ಬೈರತಿ ಬಸವರಾಜ್ ಅವರನ್ನು ಟರ್ಮಿನಲ್ ಒಳಗಡೆಯೇ ಬಂಧಿಸಿ ವಶಕ್ಕೆ ಪಡೆದಿದ್ದಾರೆ.

ಸದ್ಯ ಪೊಲೀಸರು ಭೈರತಿ ಬಸವರಾಜ್​​ನನ್ನ ಏರ್​ಪೋರ್ಟ್​ನಿಂದ ನೇರವಾಗಿ ಸಿಐಡಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ. ಇಂದು ವೈದ್ಯಕೀಯ ಪರೀಕ್ಷೆ ನಡೆಯಲಿದ್ದು, ಬಹುತೇಕ ನಾಳೆ ಜಡ್ಜ್​​ ಎದುರು ಹಾಜರುಪಡಿಸುವ ಸಾಧ್ಯತೆ ಇದೆ. ಇನ್ನು ಸಿಐಡಿ ಜಡ್ಜ್​​ ಎದುರು ರಿಮ್ಯಾಂಡ್ ಅಪ್ಲಿಕೇಷನ್ ಸಲ್ಲಿಸಲಿದೆ.

ಏನಿದು ಪ್ರಕರಣ?…

ಕಳೆದ ವರ್ಷ ಜುಲೈನಲ್ಲಿ ಭಾರತಿ ನಗರದಲ್ಲಿ ಬಿಕ್ಲು ಶಿವನನ್ನು ಶಸ್ತ್ರಸಜ್ಜಿತ ದಾಳಿಕೋರರು ಕೊಚ್ಚಿ ಕೊಲೆ ಮಾಡಿದ್ದರು. ಹಿಂದಿನ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣದ ಎಫ್‌ಐಆರ್‌ನಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಐದನೇ ಆರೋಪಿಯನ್ನಾಗಿ ಹೆಸರಿಸಲಾಗಿದ್ದು, ಗ್ಯಾಂಗ್‌ಸ್ಟರ್ ಜಗದೀಶ್ ಪದ್ಮನಾಭ ಅಲಿಯಾಸ್ ಜಗ(45)ನನ್ನು ಪ್ರಮುಖ ಆರೋಪಿಯನ್ನಾಗಿ ಮಾಡಲಾಗಿದೆ.

ಬಿಕ್ಲು ಶಿವ ಕೊಲೆ ಪ್ರಕರಣ: ಭೈರತಿ ಬಸವರಾಜ್​ಗೆ ಬಿಗ್ ಶಾಕ್​​; ಸುಪ್ರೀಂ ಕೋರ್ಟ್ ನಲ್ಲೂ ಜಾಮೀನು‌ ಅರ್ಜಿ ವಜಾ

ಕಳೆದ ಮಂಗಳವಾರ ನಿರೀಕ್ಷಣಾ ಜಾಮೀನು ಕೋರಿ ಭೈರತಿ ಬಸವರಾಜ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಪೀಠ ವಜಾಗೊಳಿಸಿತ್ತು. ಬಳಿಕ ಭೈರತಿ ಬಸವರಾಜ್ ಅವರು ನಿರೀಕ್ಷಣಾ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ನಿಯಮಿತ ಜಾಮೀನಿಗಾಗಿ ಅರ್ಜಿ ಸಲ್ಲಿಸುವಂತೆ ಹೇಳಿ, ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಇದಾದ ಬಳಿಕ ಅವರನ್ನು ಬಂಧಿಸಲು ಸಿಬಿಐ ಹುಡುಕಾಟ ನಡೆಸುತಿತ್ತು.

No Comments

Leave A Comment