ಸಾಹಸಸಿಂಹ, ಏಜೆಂಟ್ ಅಮರ್ ಚಿತ್ರ ಖ್ಯಾತಿಯ ನಿರ್ದೇಶಕ ಜೋ ಸೈಮನ್ ಹೃದಯಾಘಾತದಿಂದ ನಿಧನ...

ಸಾಹಸಸಿಂಹ, ಏಜೆಂಟ್ ಅಮರ್ ಚಿತ್ರ ಖ್ಯಾತಿಯ ನಿರ್ದೇಶಕ ಜೋ ಸೈಮನ್ ಹೃದಯಾಘಾತದಿಂದ ನಿಧನ

ಸಾಹಸ ಸಿಂಹ ವಿಷ್ಣುವರ್ಧನ್ ನಟನೆಯ ಸಾಹಸ ಸಿಂಹ ಮತ್ತು ಅಂಬರೀಶ್ ಅಭಿನಯದ ಏಜೆಂಟ್ ಅಮರ್ ಸೂಪರ್ ಹಿಟ್ ಗಳ ನಿರ್ದೇಶಕ ಜೋಸೈಮನ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಫಿಲ್ಮ್ ಚೇಂಬರ್ ಸಭೆಯಲ್ಲಿ ಭಾಗಿಯಾಗಿದ್ದ ನಿರ್ದೇಶಕ ಜೋ ಸೈಮನ್ ಅವರಿಗೆ ಸಭೆಯಲ್ಲಿದ್ದಾಗಲೇ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

ಒಂದು ಪ್ರೇಮದ ಕಥೆ(1977), ಬಂಗಾರದ ಗುಡಿ(1976) ಮೊದಲಾದವು. ಸಾಹಸಸಿಂಹ, ನ್ಯಾಯ ಗೆದ್ದಿತು, ಪ್ರೇಮ ಜಾಲ, ರವಿ ವರ್ಮ, ಊರಿಗೆ ಉಪಕಾರಿ, ನನ್ನ ರೋಷ ನೂರು ವರುಷ ಮುಂತಾದ ಚಿತ್ರಗಳನ್ನು ಜೋ ಸೈಮನ್ ನಿರ್ದೇಶಿಸಿದ್ದಾರೆ.

ಮೂಲತಃ ಮಂಡ್ಯ ಮೂಲದ ಜೋ ಸೈಮನ್ ಅವರು, 1946ರಲ್ಲಿ ಜನಿಸಿದ್ದರು. 1967ರಲ್ಲಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಅವರು, ಕೆಎಸ್ಆರ್ ದಾಸ್, RN ಜಯಗೋಪಾಲ್, ಕಣಗಾಲ್ ಪ್ರಭಾಕರ ಶಾಸ್ತ್ರಿ, ಎಸ್.ವಿ ರಾಜೇಂದ್ರ ಸಿಂಗ್ ಬಾಬು ಮುಂತಾದ ನಿರ್ದೇಶಕರೊಂದಿಗೆ ಕೆಲಸ ಮಾಡಿದ್ದರು. ನಂತರ 1977ರಲ್ಲಿ ಒಂದು ಪ್ರೇಮದ ಕಥೆ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶರಾಗಿದ್ದು ನಂತರ ಕನ್ನಡದ ಸುಮಾರು 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ನಾಳೆ Feb 14th ರವೀಂದ್ರ ಕಲಾಕ್ಷೇತ್ರದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಳೆ ಸಂಜೆಯೇ ಅಂತ್ಯ ಸಂಸ್ಕಾರ ನಡೆಯಲಿದೆ.

No Comments

Leave A Comment