ಉಡುಪಿಯ ಬಡಗುಪೇಟೆಯಲ್ಲಿನ ಪ್ರಸಿದ್ಧ ಬಟ್ಟೆಮಳಿಗೆ "ಗಿರಿಜಾ ಸಿಲ್ಕ್ "ನಲ್ಲಿ ಜೂನ್ 15ರಿ೦ದ ಗ್ರಾಹಕರಿಗಾಗಿ ಭಾರೀ ರಿಯಾಯಿತಿ ದರದಲ್ಲಿ ಮಕ್ಕಳ, ಮಹಿಳೆಯರ ಹಾಗೂ ಪುರುಷರ ಬಟ್ಟೆಗಳ ಮಾರಾಟ ಆರ೦ಭ-ಗ್ರಾಹಕರ ಅನುಕೂಲಕ್ಕಾಗಿ ಭಾನುವಾರವು ತೆರೆದಿದೆ.ತಕ್ಷಣವೇ ಭೇಟಿ ನೀಡಿ ಬಟ್ಟೆಗಳನ್ನು ಖರೀದಿಸಿ.ಎಲ್ಲಾ ಬಟ್ಟೆಗಳು ಹೊಸ ಸ್ಟಾಕ್....

CM ಕುರ್ಚಿ ಕಾಳಗದ ನಡುವೆ ಸಿದ್ದರಾಮಯ್ಯ ಬಜೆಟ್​​ಗೆ ಮುಹೂರ್ತ ಫಿಕ್ಸ್

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ಮತ್ತೆ ಜೋರಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಮುಸುಕಿನ ಗುದ್ದಾಟದ ನಡುವೆ 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ.

ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ ಸಿದ್ದರಾಮಯ್ಯ ಅವರು ಮಾರ್ಚ್ 6ರಂದು ಬೆಳಗ್ಗೆ 10:15ಕ್ಕೆ ತಮ್ಮ ದಾಖಲೆಯ 17ನೇ ಬಜೆಟ್ ಅನ್ನು ಮಂಡಿಸಲು ಸಜ್ಜಾಗಿದ್ದಾರೆ.

ಮಾರ್ಚ್ 6 ಬೆಳಗ್ಗೆ 10:15ಕ್ಕೆ ಬಜೆಟ್​ ಅಧಿವೇಶನ ಆರಂಭವಾಗಲಿದ್ದು, ಮಾರ್ಚ್ 27ಕ್ಕೆ ಅಂತ್ಯವಾಗಲಿದೆ. ಒಟ್ಟು 14 ದಿನ ಬಜೆಟ್ ಅಧಿವೇಶನ ನಡೆಯಲಿದೆ ಎಂದು ವಿಧಾನಸಭೆ ಕಾರ್ಯದರ್ಶಿ ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.ಸಿಎಂ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಬಜೆಟ್​​​ ಮಂಡಿಸಲು ಸಿದ್ಧತೆ ನಡೆಸುತ್ತಿದ್ದಾರೆ.

ಈಗಾಗಲೇ 16 ಬಾರಿ ಬಜೆಟ್​ ಮಂಡಿಸಿರುವ ಸಿಎಂ ಸಿದ್ದರಾಮಯ್ಯ ತಮ್ಮ 17ನೇ ಬಜೆಟ್​ ಮಂಡನೆಗೆ ತಯಾರಿ ನಡೆಸುತ್ತಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಅತಿ ಹೆಚ್ಚು ಬಜೆಟ್​ ಮಂಡಿಸಿದ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

No Comments

Leave A Comment