ಎಪ್ರಿಲ್ 25ರ ಶನಿವಾರದ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದ ಪದ್ಮಸರೋವರ ಸ್ವಚತಾ ಕಾರ್ಯಕ್ರಮವು ಸಾಯ೦ಕಾಲ 6ಗ೦ಟೆಯಿ೦ದ ಆರ೦ಭಗೊಳ್ಳಲಿದೆ. ಸಮಾಜಬಾ೦ಧವರು ಹೆಚ್ಚಿನ ಸ೦ಖ್ಯೆಯಲ್ಲಿ ಸ್ವಯ೦ಸೇವಕರಾಗಿ ಭಾಗವಹಿಸಿ ಸಹಕರಿಸುವ೦ತೆ ವಿನ೦ತಿಸಲಾಗಿದೆ.
ಕರ್ಣಾಟಕ ಬ್ಯಾಂಕಿನ 102ನೇ ಸಂಸ್ಥಾಪಕರ ದಿನಾಚರಣೆ- ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ
ಉಡುಪಿ:ಕರ್ಣಾಟಕ ಬ್ಯಾಂಕಿನ ಉಡುಪಿ ವಲಯ ಕಚೇರಿ ವತಿಯಿಂದ ಬ್ಯಾಂಕಿನ 102ನೇ ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಜಿಲ್ಲಾ ಆಸ್ಪತ್ರೆ ರಕ್ತ ನೀಧಿ ಕೇಂದ್ರ ಮತ್ತು ಜಿಲ್ಲಾ ಆಸ್ಪತ್ರೆ ಎನ್.ಸಿ.ಡಿ ವಿಭಾಗ ಮತ್ತು ಗಾಂಧಿ ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರವನ್ನು ಉಡುಪಿಯ ಅಂಬಾಗಿಲಿನಲ್ಲಿರುವ ಕರ್ನಾಟಕ ಬ್ಯಾಂಕಿನ ಉಡುಪಿ ವಲಯ ಕಚೇರಿ ಯಲ್ಲಿ ಫೆ. 18 ರಂದು ಬೆಳಗ್ಗೆ 8.30 ರಿಂದ ಮಧ್ಯಾಹ್ನ 2 ರ ವರಗೆ ನೆಡೆಯತು ಈ ಶಿಬಿರದಲ್ಲಿ ಉಚಿತ ಮಧುಮೇಹ ಪರೀಕ್ಷೆ ರಕ್ತದೊತ್ತಡ ಪರೀಕ್ಷೆ ,ದಂತ ತಪಾಸಣೆ, ECG ಪರೀಕ್ಷೆ ,HB ಪರೀಕ್ಷೆ ,Blood group ಪರೀಕ್ಷೆ ಹಾಗೂ ರಕ್ತ ದಾನವನ್ನು ಸಹ ಹಮ್ಮಿಕೊಳ್ಳಲಾಗಿತ್ತು.
ಈ ಶಿಬಿರದಲ್ಲಿ ಕರ್ನಾಟಕ. ಬ್ಯಾಂಕಿನ ಎಲ್ಲಾ ಗ್ರಾಹಕರು, ಸಾರ್ವಜನಿಕರು ಹಾಗೂ ಬ್ಯಾಂಕಿನ ನೌಕರರು ಈ ಉಚಿತ ತಪಾಸಣೆಯ ಸೌಲಭ್ಯವನ್ನು ಪಡೆದುಕೊಂಡರು ಕಾರ್ಯಕ್ರಮವನ್ನು ಉದ್ಗಾಟಿಸಿ ಮಾತನಾಡಿದ ಕರ್ನಾಟಕ ಬ್ಯಾಂಕಿನ ನಿದರ್ಶಕರಾದ ಬಾಲಕೃಷ್ಣ ಹಲಸೆ ಈ ರಕ್ತ ದಾನದಲ್ಲಿ ಪಾಲ್ಗೊಂಡು ಅಗತ್ಯ ಇದ್ದವರಿಗೆ ನೆರವಾಗುವ ಸಾಮಾಜಿಕ ಕಾರ್ಯದಲ್ಲಿ ಬ್ಯಾಂಕಿನೊಂದಿಗೆ ಕೈ ಜೋಡಿಸಬೇಕು ಎಂದು ಹೇಳಿದರು.
ನಂತರ ಮಾತನಾಡಿದ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಸರ್ಜನ್ ರಾದ ಡಾ.ಹೆಚ್ ಅಶೋಕ್ ರಕ್ತದಾನ ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ದೇಶದಲ್ಲಿ ಪ್ರತಿವರ್ಷ 41 ದಶಲಕ್ಷ ಯುನಿಟ್ ರಕ್ತದ ಕೊರತೆ ಎದುರಾಗುತ್ತಿದೆ. ಸಮಯಕ್ಕೆ ಸರಿಯಾಗಿ ರಕ್ತ ಸಿಗದೆ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳು, ಅಪಘಾತದ ಗಾಯಾಳುಗಳು ಮೃತಪಡುತ್ತಿದ್ದಾರೆ. ಅಮೂಲ್ಯವದ ಜೀವಗಳನ್ನು ಉಳಿಸಲು ರಕ್ತದಾನ ಮಾಡುವುದು ಅತಿ ಅಗತ್ಯವಾಗಿದ್ದು, ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಬೇಕು ಎಂದು ಕರೆ ನೀಡಿದರು.
ನಂತರ ಮಾತಾನಾಡಿದ ಗಾಂಧಿ ಆಸ್ಪತ್ರೆಯ ಮಖ್ಯಸ್ತರಾದ ಡಾ.ಹರೀಶ್ ಚಂದ್ರ ಜನಸಾಮಾನ್ಯರಲ್ಲಿ ರಕ್ತದಾನದ ಬಗ್ಗೆ ತಪ್ಪು ಕಲ್ಪನೆಗಳಿದ್ದು ಹೋಗಲಾಡಿಸಬೇಕು. ಹೆಚ್ಚು ಜನರು ಸೇರುವ ಕೇಂದ್ರಗಳಲ್ಲಿ ನಿಯಮಿತವಾಗಿ ರಕ್ತದಾನ ಶಿಬಿರ ಆಯೋಜಿಸಬೇಕು ಆ ಮೂಲಕ ಜನರಲ್ಲಿ ಅರಿವು ಮುಡಿಸಬೇಕು ಎಂದರು ಹಾಗೂ ಕರ್ನಾಟಕ ಬ್ಯಾಂಕ್ ಉಡುಪಿ ಪ್ರಾದೇಶಿಕ ಕಛೇರಿ ಇದರ ಸಹಾಯಕ ಮಹಾ ಪ್ರಭದಂಕ ಮತ್ತು ವಲಯ ಮಖ್ಯಸ್ಥರಾದ ರಮೇಶ್ ವೈದ್ಯ ಇವರು ತುರ್ತು ಪರಿಸ್ಥಿತಿಗಳಲ್ಲಿ ರಕ್ತದ ಅಗತ್ಯವಿದ್ದಾಗ ನಾವು ನಂಬುವುದು ನಮ್ಮಲ್ಲಿರುವ ಉತ್ತಮವಾದ ಬ್ಲಡ್ ಬ್ಯಾಂಕ್ ವ್ಯವಸ್ಥೆಗಳನ್ನು. ರಕ್ತದಾನ ವಾಡುವುದರಿಂದ ನಾವು ಇನ್ನೊಬ್ಬರ ಜೀವ ಉಳಿಯಲು ಕಾರಣರಾಗುತ್ತೇವೆ ಎಂದು ಹೇಳಿದರು ಮತ್ತು ಈ ಕರ್ನಾಟಕ ಬ್ಯಾಂಕ್ ಎರಡು ವರ್ಷದಿಂದ ರಕ್ತ ದಾನ ಮತ್ತು ಆರೋಗ್ಯ ಶಿಬಿರವನ್ನು ಆಯೋಜಿಸಿತ್ತ ಬಂದಿದೆ ಮುಂದಿನ ದಿನಗಳಲ್ಲಿ ಈತಂಹ ಹಲಾವರು ಆರೋಗ್ಯ ಶಿಬಿರಗಳನ್ನು ಹಮ್ಮಿಕೊಳ್ಳುವಾದಾಗಿ ಹೇಳಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಆಸ್ಪತ್ರೆಯ ರಕ್ತ ನಿಧಿಕೇಂದ್ರದ ಮುಖ್ಯಸ್ಥರುರಾದ ಡಾ.ವೀಣಾ ಕುಮಾರಿ ಇವರು ರಕ್ತದಾನ ಮಾಡವಲ್ಲಿ ನಮ್ಮ ಪಾತ್ರ ಏನು ಯಾರು ಎಲ್ಲ ರಕ್ತದಾನ ಮಾಡಬಹುದು ಎಂದು ಸಂಕ್ಷಿಪ್ತವಾಗಿ ಉಪನ್ಯಾಸ ನೀಡಿದರು.
ಈ ಕಾರ್ಯಕ್ರಮ ದಲ್ಲಿ ಗಾಂಧಿ ಆಸ್ಪತ್ರೆಯ ವೈದ್ಯಕೀಯ ನಿದರ್ಶಕರಾದ ಡಾ.ವ್ಯಾಸರಾಜ ತಂತ್ರಿ ಇವರು ಮತಾನಾಡಿ ಜೀವನದ ಬ್ಯಾಂಕ್ ಕರ್ನಾಟಕ ಬ್ಯಾಂಕ್ ಹಾಗೂ ಜೀವ ಕೊಡುವ ಬ್ಯಾಂಕ್ ರಕ್ತ ನಿಧಿ ಬ್ಯಾಂಕ್ ಎಂದು ಹೇಳಿದರು ಈ ಶಿಬಿರದಲ್ಲಿ ಕರ್ನಾಟಕ ಬ್ಯಾಂಕಿನ ಎಲ್ಲ ಅಧಿಕಾರಿ ವರ್ಗದವರು ಹಾಗು ಸಿಬ್ಬಂದಿಗಳು ಉಪಸ್ಥಿತರಿದ್ದರು ಈ ಕಾರ್ಯಕ್ರಮವನ್ನು ನಿರೂಪಣೆಯನ್ನು ಮತ್ತು ಸ್ವಾಗತವನ್ನು ಕರ್ನಾಟಕ ಬ್ಯಾಂಕಿನ ಮಖ್ಯ ಪ್ರಬಂದಕ ಸುಬ್ರಹ್ಮಣ್ಯ ಬಾರ್ವೆ ಮಾಡಿದರು.
ಈ ಶಿಬಿರದಲ್ಲಿ ಸುಮಾರು 50 ಜನರು ರಕ್ತದಾನ ಮಾಡಿದರು ಹಾಗೂ 56 ECG ಪರೀಕ್ಷೆ ಹಾಗು 40 ದಂತ ಪರೀಕ್ಷೆ 67 ಮಧುಮೇಹ ಪರೀಕ್ಷೆ ಮತ್ತು ರಕ್ತದೊತ್ತಡ ಪರೀಕ್ಷೆ ಗೆ ಒಳಪಟ್ಟರು.