ಅಮೆರಿಕ ಸುಪ್ರೀಂ ಕೋರ್ಟ್ ತೀರ್ಪಿಗೆ ಸೆಡ್ಡು ಹೊಡೆದ ಟ್ರಂಪ್; ಜಾಗತಿಕ ಸುಂಕ ಶೇ. 10 ರಿಂದ 15ಕ್ಕೆ ಹೆಚ್ಚಿಸಿ ಆದೇಶ!...ಕಲ್ಲು ತೂರಾಟ ಕೇಸ್​: ಇಬ್ಬರು ಹಿಂದೂ ಕಾರ್ಯಕರ್ತರ ಬಂಧನ; ಮುತಾಲಿಕ್, ಕೆರೆಹಳ್ಳಿಗೆ ನಿರ್ಬಂಧ...

ಉಳ್ಳಾಲ : ವಂಚನೆ ಪ್ರಕರಣ – 15 ವರ್ಷ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ನಗರದ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ವಂಚನೆ ಪ್ರಕರಣಗಳಲ್ಲಿ 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಮೂಲದ 41 ವರ್ಷದ ಅಜಯ್ ಪ್ರಸಾದ್ ಜಿ ಬಂಧಿತ ಆರೋಪಿ ಈತನ ವಿರುದ್ಧ 3 ವಂಚನೆ ಪ್ರಕರಣಗಳು ದಾಖಲಾಗಿದ್ದವು.

ಅಜಯ್ ಪ್ರಸಾದ್ ಜಿ ನ್ಯಾನೋ ಫರಾಕ್ಸ್‌ ಇಂಡಿಯಾ ಎಂಬ ಸಂಸ್ಥೆಯ ಫರಾಕ್ಸ್‌ ರೋಬೋಟ್‌ ಸಾಫ್ಟ್‌ವೇರ್‌ ಮೂಲಕ ಕರೆನ್ಸಿ ಟ್ರೇಡಿಂಗ್ ಮತ್ತು ಷೇರು ವ್ಯವಹಾರದಲ್ಲಿ ತಿಂಗಳಿಗೆ 40% ಲಾಭ ಹಾಗೂ 20% ಮರುಪಾವತಿ ನೀಡುವುದಾಗಿ ಭರವಸೆ ನೀಡುತ್ತಾ, ಗ್ರಾಹಕರ ಐಡಿ ಕಾರ್ಡ್ ಮತ್ತು ದಾಖಲೆಗಳನ್ನು ಪಡೆದು ವಿಶ್ವಾಸ ಹುಟ್ಟಿಸಿ, ವಂಚನೆ ನಡೆಸಿರುವ ಆರೋಪ ಇದೆ. ವಿವಿಧ ಗ್ರಾಹಕರಿಂದ ಸುಮಾರು 1 ಕೋಟಿ 20 ಲಕ್ಷ ರೂ. ಹಣವನ್ನು ವಂಚಿಸಿಕೊಂಡಿದ್ದರೂ, ಯಾವುದೇ ಲಾಭ ಅಥವಾ ಮರುಪಾವತಿ ನೀಡದೇ ಹಣವನ್ನು ದುರುಪಯೋಗಪಡಿಸಿರುವುದಾಗಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಉಲ್ಲೇಖಿಸಲಾಗಿದೆ. ಈ ಪ್ರಕರಣಗಳು 2011ನೇ ಸಾಲಿನಲ್ಲಿ ದಾಖಲಾಗಿದ್ದವು.

ಅಜಯ್ ಪ್ರಸಾದ್ ಜಿಯನ್ನು ಉಳ್ಳಾಲ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡ ಬೆಂಗಳೂರಿನಿಂದ ದಸ್ತಗಿರಿ ಮಾಡಿ ಮಂಗಳೂರು ನಗರದ ಮಾನ್ಯ 7 ನೇ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದು, ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಮುಂದುವರಿಯುತ್ತಿದೆ.

No Comments

Leave A Comment