.....ದೇಶದೆಲ್ಲೆಡೆಯಲ್ಲಿ ಸ೦ಭ್ರಮದ ದೀಪಾವಳಿ ಹಬ್ಬ...ಗೂಡುದೀಪ,ಸಿಹಿತಿ೦ಡಿ,ಹೊಸಬಟ್ಟೆ
ಯ ಖರೀದಿಯಲ್ಲಿ ನಾಡಿನ ಜನತೆ-ಎಲ್ಲೆಡೆಯಲ್ಲಿ ಪಟಾಕಿಯ ಸದ್ದು.......ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ,ಓದುಗರಿ ಬೆಳಕಿನ ಹಬ್ಬ ದೀಪಾವಳಿಯು ಶುಭವನ್ನು೦ಟುಮಾಡಲಿ ಎ೦ದು ಕರಾವಳಿಕಿರಣ ಡಾಟ್ ಶುಭವನ್ನು ಕೋರುತ್ತಿದೆ....
ವಿವಿಧ ದೇಶಗಳ ಮೇಲೆ ಟ್ರಂಪ್ ವಿಧಿಸಿದ್ದ ಸುಂಕಗಳನ್ನು ರದ್ದುಗೊಳಿಸಿದ ಅಮೆರಿಕ ಸುಪ್ರೀಂ ಕೋರ್ಟ್
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು ಶುಕ್ರವಾರ ಅಮೆರಿಕದ ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಅಲ್ಲದೆ ಟ್ರಂಪ್ ತಮ್ಮ ಅಧಿಕಾರ ವ್ಯಾಪ್ತಿಯನ್ನು ಮೀರಿದ್ದಾರೆ ಎಂದು ಹೇಳಿದೆ.
ಟ್ರಂಪ್, ಅಂತರಾಷ್ಟ್ರೀಯ ತುರ್ತು ಆರ್ಥಿಕ ಅಧಿಕಾರ ಕಾಯ್ದೆ ಬಳಸಿಕೊಂಡು ಭಾರತ ಸೇರಿದಂತೆ ಅನೇಕ ದೇಶಗಳ ಮೇಲೆ ಮೇಲೆ ಮನಬಂದಂತೆ ಸುಂಕ ವಿಧಿಸಿದ್ದರು.
ಇದೀಗ ಅಮೆರಿಕ ಸುಪ್ರೀಂ ಕೋರ್ಟ್ ಸಂಪುಟ ಒಪ್ಪಿಗೆಯಿಲ್ಲದೆ ಜಾಗತಿಕ ಸುಂಕಗಳನ್ನು ವಿಧಿಸುವ ಅಧಿಕಾರವಿಲ್ಲ ಎನ್ನುವ ಮೂಲಕ ಟ್ರಂಪ್ಗೆ ದೊಡ್ಡ ಶಾಕ್ ನೀಡಿದೆ.
ಆರು-ಮೂರು ನ್ಯಾಯಮೂರ್ತಿಗಳ ಬೆಂಬಲದ ತೀರ್ಪಿನಲ್ಲಿ. ಅಂತರರಾಷ್ಟ್ರೀಯ ತುರ್ತು ಆರ್ಥಿಕ ಅಧಿಕಾರ ಕಾಯ್ದೆ (IEEPA “ಅಧ್ಯಕ್ಷರಿಗೆ ಸುಂಕಗಳನ್ನು ವಿಧಿಸಲು ಅಧಿಕಾರ ನೀಡುವುದಿಲ್ಲ” ಎಂದು ಹೇಳಿದೆ.
ಐಇಇಪಿಎ ಅಡಿಯಲ್ಲಿ ಟ್ರಂಪ್ ವಿಧಿಸಿರುವ ಸುಂಕಗಳು ಕಾನೂನುಬಾಹಿರವೆಂದು ಈ ಹಿಂದೆ ಕೆಳ ನ್ಯಾಯಾಲಯ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.
ಟ್ರಂಪ್ ತಮ್ಮ ಅಧಿಕಾರವನ್ನು ವ್ಯಾಪ್ತಿಯನ್ನು ಮೀರಿ ವ್ಯಾಪಕ ಸುಂಕಗಳನ್ನು ವಿಧಿಸಿದ್ದಾರೆ ಮತ್ತು ಅವುಗಳಲ್ಲಿ ಹೆಚ್ಚಿನವು ಜಾರಿಗೆ ಬರದಂತೆ ತಡೆಹಿಡಿದಿದ್ದಾರೆ ಎಂದು ಕೆಳ ವ್ಯಾಪಾರ ನ್ಯಾಯಾಲಯವು ಮೇ ತಿಂಗಳಲ್ಲಿ ತೀರ್ಪು ನೀಡಿತ್ತು. ಆದರೆ ಸರ್ಕಾರವು ಮೇಲ್ಮನವಿ ಸಲ್ಲಿಸಲು ಅವಕಾಶ ಕೋರಿದ್ದರಿಂದ ಆ ತೀರ್ಪನ್ನು ತಡೆಹಿಡಿಯಲಾಗಿತ್ತು.