....ನಾಡಿನ ಎಲ್ಲೆಡೆಯಲ್ಲಿ ಇ೦ದಿನಿ೦ದ (ಭಾನುವಾರದಿ೦ದ)ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ...16ರ೦ದು ಶ್ರೀಶಾರದಾ ಪೂಜೆ...

ರಾಯಚೂರಿನ ಬಸವೇಶ್ವರ ವೃತ್ತದಲ್ಲಿ ಭೀಕರ ಅಪಘಾತ: ಬೈಕ್‌ನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವು

ರಾಯಚೂರು: ಬೈಕ್​​ ಮತ್ತು ಟ್ರಕ್​ ನಡುವೆ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಯುವಕರು ಮೃತಪಟ್ಟಿರುವ ಘಟನೆ ರಾಯಚೂರು ನಗರದ ಬಸವೇಶ್ವರ ವೃತ್ತದಲ್ಲಿ ನಡೆದಿದೆ.

ಇಂದು ನಸುಕಿನ ಜಾವ 3 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಮೊಹಮದ್ ಅಲಿ ಪಾಶಾ (24), ನೂರ ಮೊಹಮದ್ (19), ಫಯಾಜ್( 26) ಮೃತ ದುರ್ದೈವಿಗಳು. ಮೃತರೆಲ್ಲಾ ನಗರದ ಸುಖಾಣಿ ಕಾಲೋನಿ ನಿವಾಸಿಗಳು ಎಂದು ಗುರುತಿಸಲಾಗಿದೆ.

ಗಂಜ್ ವೃತ್ತದಿಂದ ಬರುತ್ತಿದ್ದ ಟ್ರಕ್ ಲಿಂಗಸುಗೂರು ರಸ್ತೆಯಿಂದ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸವಾರರು ಮೃತಪಟ್ಟಿದ್ದಾರೆ. ಪ್ರಕರಣ ಸಂಬಂಧ ರಾಯಚೂರು ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನ ರಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ.

ಅಪಘಾತದ ತೀವ್ರತೆಗೆ ಬೈಕ್​​ನಲ್ಲಿದ್ದ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಅಪಘಾತದ ಬಳಿಕ ಟ್ರಕ್ ಸಮೇತ ಚಾಲಕ ಪರಾರಿಯಾಗಿದ್ದು, ಸ್ಥಳಕ್ಕೆ ರಾಯಚೂರು ಟ್ರಾಫಿಕ್ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

No Comments

Leave A Comment