.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........
ಕರ್ನಾಟಕವನ್ನು ಮಣಿಸಿ ಚೊಚ್ಚಲ ರಣಜಿ ಟ್ರೋಫಿಗೆ ಮುತ್ತಿಕ್ಕಿದ ಜಮ್ಮುಕಾಶ್ಮೀರ
ಹುಬ್ಬಳ್ಳಿಯ ಕೆಎಸ್‌ಸಿಎ ಕ್ರಿಕೆಟ್ ಮೈದಾನದಲ್ಲಿ ನಡೆದ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ಹಾಗೂ ಜಮ್ಮು ಮತ್ತು ಕಾಶ್ಮೀರ ತಂಡಗಳು ಮುಖಾಮುಖಿಯಾಗಿದ್ದವು. ಇದೇ ಮೊಟ್ಟ ಮೊದಲ ಬಾರಿಗೆ ರಣಜಿ ಟ್ರೋಫಿ ಫೈನಲ್ಗೇರಿದ್ದ ಜಮ್ಮು ಕಾಶ್ಮೀರ ತಂಡ ಬಲಿಷ್ಠ ಕರ್ನಾಟಕ ತಂಡವನ್ನು ಏಕಪಕ್ಷೀಯವಾಗಿ ಮಣಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ರಣಜಿ ಟ್ರೋಫಿ ಇತಿಹಾಸದಲ್ಲಿ 15ನೇ ಬಾರಿಗೆ ಫೈನಲ್ ತಲುಪಿದ್ದ ಕರ್ನಾಟಕ ತಂಡ ತವರು ನೆಲದ ಪ್ರಯೋಜನ ಪಡೆದು ಸುಲಭವಾಗಿ ಜಮ್ಮುಕಾಶ್ಮೀರ ತಂಡವನ್ನು ಮಣಿಸುತ್ತದೆ ಎಂದು ಎಲ್ಲರೂ ನಿರೀಕ್ಷಿಸಿದ್ದರು. ಇದಕ್ಕೆ ಪೂರಕವಾಗಿ ಕರ್ನಾಟಕ ತಂಡ ಘಟಾನುಘಟಿಗಳಿಂದಲೇ ತುಂಬಿ ತುಳುಕುತ್ತಿತ್ತು.
ತಂಡದಲ್ಲಿ ಅನುಭವಿ ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಕರುಣ್ ನಾಯರ್ ಮತ್ತು ದೇವದತ್ ಪಡಿಕ್ಕಲ್ರಂತಹ ಬ್ಯಾಟ್ಸ್ಮನ್ಗಳಿದ್ದರೆ, ಬೌಲಿಂಗ್ ವಿಭಾಗದಲ್ಲಿ ಪ್ರಸಿದ್ಧ್ ಕೃಷ್ಣ ಹಾಗೂ ಶ್ರೇಯಸ್ ಗೋಪಾಲ್ರಂತಹ ಪ್ರತಿಭಾವಂತ ಬೌಲರ್ಗಳಿದ್ದರು. ಆದಾಗ್ಯೂ ಪಂದ್ಯ ಆರಂಭವಾದ ಮೊದಲ ದಿನದಿಂದಲೂ ಪಂದ್ಯವನ್ನು ತನ್ನ ಹಿಡಿತಕ್ಕೆ ತೆಗೆದುಕೊಂಡಿದ್ದ ಜೆಕೆ ತಂಡ ಕೊನೆಯವರೆಗೂ ಕರ್ನಾಟಕ ತಂಡಕ್ಕೆ ಪಂದ್ಯದ ಮೇಲೆ ಹಿಡಿತ ಸಾಧಿಸಲು ಒಂದೇ ಒಂದು ಅವಕಾಶವನ್ನು ಬಿಟ್ಟುಕೊಡಲಿಲ್ಲ.