....ನಾಡಿನ ಎಲ್ಲೆಡೆಯಲ್ಲಿ ಇ೦ದಿನಿ೦ದ (ಭಾನುವಾರದಿ೦ದ)ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ...16ರ೦ದು ಶ್ರೀಶಾರದಾ ಪೂಜೆ...

ಬ್ರಹ್ಮಾವರ: ಹಿರಿಯ ಪತ್ರಕರ್ತ, ಉಪಪ್ರಾಂಶುಪಾಲ ಶೇಷಗಿರಿ ಭಟ್ ಆತ್ಮಹತ್ಯೆ

ಉಡುಪಿ: ಬ್ರಹ್ಮಾವರ ತಾಲೂಕಿನ ಹಿರಿಯ ಪತ್ರಕರ್ತ, ಖಾಸಗಿ ಕಾಲೇಜಿನ ಉಪಪ್ರಾಂಶುಪಾಲ ಶೇಷಗಿರಿ ಭಟ್ (45) ಅವರು ಇಂದು ಬೆಳಿಗ್ಗೆ ಆತ್ಮಹತ್ಯೆಗೆ ಶರಣಾದರು.

ಬ್ರಹ್ಮಾವರ ಕ್ರಾಸ್‌ ಲ್ಯಾಂಡ್ ಕಾಲೇಜಿನ ಉಪಪ್ರಾಂಶುಪಾಲ ಶೇಷಗಿರಿ ಭಟ್ ಅವರು ಇಂದು ಬೆಳಿಗ್ಗೆ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಕಳೆದ ಕೆಲವು ದಿನಗಳಿಂದ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಆದರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

No Comments

Leave A Comment