ಉಡುಪಿ ಜಿಲ್ಲಾ ಕಾ೦ಗ್ರೆಸ್ ನಲ್ಲಿ ಅಸಮಾಧಾನದ ಹೊಗೆ-ಒಬ್ಬರಿಗೆ ಒ೦ದೇ ಹುದ್ದೆ ನೀಡುವ ಬದಲು ಒಬ್ಬರಿಗೆ ಏರಡೆರಡು ಹುದ್ದೆ...ಕಾ೦ಗ್ರೆಸ್ ಪಕ್ಷದಲ್ಲಿ ಕಾರ್ಯಕರ್ತರಿಗೆ ಅಸಮಧಾನ...

ಸಿಸಿಬಿ ಪೊಲೀಸರ ಮೆಗಾ ರೇಡ್​​: ಪ್ರತಿಷ್ಠಿತ ಅಪಾರ್ಟ್​ಮೆಂಟ್​ನಲ್ಲಿ 10 ಕೋಟಿ ರೂ. ಮೌಲ್ಯದ ಡ್ರಗ್ಸ್​​ ಸೀಜ್​

ಬೆಂಗಳೂರು, ಮಾರ್ಚ್​​ 03: ಡ್ರಗ್ಸ್​​ ದಂಧೆಕೋರರಿಗೆ ಬೆಂಗಳೂರು ಪೊಲೀಸರು ಭರ್ಜರಿ ಶಾಕ್​​ ಕೊಟ್ಟಿದ್ದಾರೆ. ನಗರದ ಪ್ರತಿಷ್ಠಿತ ಅಪಾರ್ಟ್​ಮೆಂಟ್​ನಲ್ಲಿ ಡ್ರಗ್ಸ್ ಪತ್ತೆ ಮಾಡಲಾಗಿದ್ದು, ಬರೋಬ್ಬರಿ 10 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ಸಿಸಿಬಿ ವಶಕ್ಕೆ ಪಡೆದಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಕೇರಳ ಮೂಲದ ಅಶ್ವಿನ್(27), ಮೊಬಿನಾ(25) ಬಂಧಿತ ಆರೋಪಿಗಳಾಗಿದ್ದು, LSD, ಹೈಡ್ರೋ ಗಾಂಜಾ ಮತ್ತು ಚರಸ್​​ನ ಆರೋಪಿಗಳಿಂದ ಸೀಜ್​​ ಮಾಡಲಾಗಿದೆ. LSD ಸ್ಟ್ರಿಪ್ಸ್​​ಗಳನ್ನು ಕರ್ನಾಟಕದಲ್ಲಿ ವಶಪಡಿಸಿಕೊಂಡಿರೋದು ಇದೇ ಮೊದಲು ಎನ್ನಲಾಗಿದೆ.

ಸೀಜ್​​ ಮಾಡಲಾದ ಡ್ರಗ್ಸ್​

ಆರೋಪಿಗಳು ದೇವರ ಚಿತ್ರ ಸೇರಿ ವಿವಿಧ ಚಿತ್ರಕಲಾ ರೂಪದಲ್ಲಿ LSD ಸ್ಟ್ರಿಪ್ಟ್ ಮಾರಾಟ ಮಾಡುತ್ತಿದ್ದರು ಎಂಬುದು ಬೆಂಗಳೂರು ಸಿಸಿಬಿ ನಾರ್ಕೊಟಿಕ್ಸ್ ವಿಭಾಗದ ಕಾರ್ಯಾಚರಣೆಯ ವೇಳೆ ಬಯಲಾಗಿದೆ. ಬಂಧಿತ ಇಬ್ಬರೂ ಆರೋಪಿಗಳು ಡ್ರಗ್ಸ್ ಪೆಡ್ಲಿಂಗ್ ಅನ್ನೇ ವೃತ್ತಿ ಮಾಡಿಕೊಂಡಿದ್ದರು. ಇವರಿಗೆ ವಿನ್ಸೆಂಟ್​ ಎಂಬಾತ ಥಾಯ್​ಲ್ಯಾಂಡ್​​ನಿಂದ ಡ್ರಗ್ಸ್​ ಕಳಿಸುತ್ತಿದ್ದ. ವಿಮಾನದ ಮೂಲಕ ಆಗಾಗ ಅಲ್ಪ ಪ್ರಮಾಣದಲ್ಲಿ ಡ್ರಗ್ಸ್ ಪೂರೈಕೆ ಆಗುತ್ತಿತ್ತು. ವಿನ್ಸೆಂಟ್ ಸೂಚಿಸಿದ ಜಾಗದಲ್ಲಿ ಅಶ್ವಿನ್ ಮತ್ತು ಮೊಬಿನಾ ಡ್ರಗ್ಸ್ ಇಡುತ್ತಿದ್ದರು ಎಂಬುದು ಗೊತ್ತಾಗಿದೆ. ಇನ್ನು ಪ್ರಕರಣ ಸಂಬಂಧ ಫ್ಲ್ಯಾಟ್​​​​ ಮಾಲೀಕನ ಪಾತ್ರದ ಬಗ್ಗೆಯೂ ಸಿಸಿಬಿಯಿಂದ ಪರಿಶೀಲನೆ ಮುಂದುವರಿದಿದೆ.

ವಿದ್ಯಾರ್ಥಿಗಳು, ಐಟಿಬಿಟಿ ಉದ್ಯೋಗಿಗಳಿಗೆ ಡ್ರಗ್ಸ್​ ಮಾರಾಟ ಮಾಡುತ್ತಿದ್ದ ಒಡಿಶಾ ಮೂಲದ ಡ್ರಗ್ ಪೆಡ್ಲರ್​​ ಓವರ್ನನ್ನು ಬೆಂಗಳೂರಿನ ವೈಟ್​ಫೀಲ್ಡ್ ಪೊಲೀಸರು ಬಂಧಿಸಿದ್ದಾರೆ. ಲಿಂಗರಾಜ್ ದಾಸ್​​ ಬಂಧಿತ ಆರೋಪಿಯಾಗಿದ್ದು, ಈತನಿಂದ 55 ಲಕ್ಷ ಮೌಲ್ಯದ 27 ಕೆಜಿ ಗಾಂಜಾ, 3 ಕೆಜಿ 200 ಗ್ರಾಂ ಆ್ಯಶಿಸ್ ಆಯಿಲ್ ಜಪ್ತಿ ಮಾಡಲಾಗಿದೆ.

No Comments

Leave A Comment