ಬೆಂಗಳೂರು: ಅಡುಗೆ ವಿಷಯಕ್ಕೆ ಅತ್ತೆ ಜೊತೆ ಜಗಳ; 35 ವರ್ಷದ ಎಂಜಿನಿಯರ್ ಆತ್ಮಹತ್ಯೆ! ಬೆಂಗಳೂರು: ಕೌಟುಂಬಿಕ ಕಲಹದಿಂದ ಬೇಸತ್ತ 35 ವರ್ಷದ ಎಂಜಿನಿಯರ್ ಒಬ್ಬರು ಮಂಗಳವಾರ ಬೆಂಗಳೂರಿನ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು 35 ವರ್ಷದ ಸುಷ್ಮಾ ಎಂದು ಗುರುತಿಸಲಾಗಿದ್ದು, ಅವರು ಈ ಹಿಂದೆ ಡೆಲ್ ಎಂಬ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಪೊಲೀಸರ ಪ್ರಕಾರ, ಸುಷ್ಮಾ ಅವರು ಐದು ವರ್ಷಗಳ ಹಿಂದೆ ಪುನೀತ್ ಕುಮಾರ್ ಎಂಬುವವರನ್ನು ವಿವಾಹವಾಗಿದ್ದರು ಮತ್ತು ದಂಪತಿಗೆ ನಾಲ್ಕು ವರ್ಷದ ಮಗನಿದ್ದಾನೆ. ಸಣ್ಣಪುಟ್ಟ ವಿಷಯಗಳಿಗೆ ಮನೆಯಲ್ಲಿ ಆಗಾಗ್ಗೆ ಜಗಳಗಳು ನಡೆಯುತ್ತಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ. ನಿನ್ನೆ ಸುಷ್ಮಾ ಮತ್ತು ಅವರ ಅತ್ತೆ ಕಲ್ಪನಾ ನಡುವೆ ಅಡುಗೆ ಮಾಡುವ ವಿಚಾರವಾಗಿ ಜಗಳ ನಡೆದಿತ್ತು ಎನ್ನಲಾಗಿದೆ. ಕಲ್ಪನಾ ಅವರು ಸುಷ್ಮಾ ಅವರಿಗೆ ಅಡುಗೆ ಮಾಡಲು ಬಿಡುತ್ತಿರಲಿಲ್ಲ ಮತ್ತು ವಿವಿಧ ವಿಷಯಗಳ ಕುರಿತು ಅವರಿಗೆ ಕಿರುಕುಳ ನೀಡುತ್ತಿದ್ದರು ಎಂದು ಸುಷ್ಮಾ ಅವರ ಕುಟುಂಬ ಆರೋಪಿಸಿದೆ. ಇದರಿಂದ ಮನನೊಂದ ಸುಷ್ಮಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ವರದಕ್ಷಿಣೆ ಕಿರುಕುಳದ ಆರೋಪ ಹೊರಿಸಿ ಸುಷ್ಮಾ ಅವರ ಕುಟುಂಬದವರು ನೀಡಿದ ದೂರಿನ ಮೇರೆಗೆ, ಪೊಲೀಸರು ಆಕೆಯ ಪತಿಯನ್ನು ಬಂಧಿಸಿದ್ದು, ಅತ್ತೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. Share this: Share on Facebook (Opens in new window) Facebook Share on X (Opens in new window) X Share on X (Opens in new window) X Share on Pinterest (Opens in new window) Pinterest Share on Telegram (Opens in new window) Telegram Share on Threads (Opens in new window) Threads Share on WhatsApp (Opens in new window) WhatsApp Related