....ನಾಡಿನ ಎಲ್ಲೆಡೆಯಲ್ಲಿ ಇ೦ದಿನಿ೦ದ (ಭಾನುವಾರದಿ೦ದ)ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ...16ರ೦ದು ಶ್ರೀಶಾರದಾ ಪೂಜೆ...

ಮಲ್ಪೆ: ಪ್ರೀತಿಯ ವಿಚಾರದಲ್ಲಿ ರಾಜಿ ಪಂಚಾಯತಿಗೆ-ಮಂಜು ಕೊಳಗೆ ಚೂರಿ ಇರಿತ ಪ್ರಕರಣ- ಐವರು ಆರೋಪಿಗಳ ಬಂಧನ

ಉಡುಪಿ: ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಅವರ ಪತಿ ಮಂಜು ಕೊಳ ಅವರಿಗೆ ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪಲಿಮಾರು ನಿವಾಸಿಗಳಾದ ಪ್ರಜೇಶ್, ಪುನೀತ್, ಅಮೃತ್‌, ಅಭಿಜಿತ್ ಹಾಗೂ ಇನೋರ್ವ ಆರೋಪಿಯನ್ನು ಬಂಧಿಸಲಾಗಿದೆ.

ಘಟನೆ ವಿವರ:
ಪ್ರೀತಿಯ ವಿಚಾರದಲ್ಲಿ ರಾಜಿ ಪಂಚಾಯತಿ ನಡೆಸುವ ಸಲುವಾಗಿ ಮಂಜು ಕೊಳ ಅವರನ್ನು ಕರೆದಿದ್ದರು ಎನ್ನಲಾಗಿದೆ. ಈ ಸಂದರ್ಭ ಮಾತಿಗೆ ಮಾತು ಬೆಳೆದಾಗ ಯುವಕ ಚೂರಿ ಇರಿದಿದ್ದಾನೆ ಎಂದು ತಿಳಿದುಬಂದಿದೆ. ಹೊಟ್ಟೆ ಭಾಗಕ್ಕೆ ಇರಿದ ಪರಿಣಾಮ ಅಲ್ಲೇ ಕುಸಿದ ಮಂಜು ಕೊಳ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕೃತ್ಯ ವೈಯಕ್ತಿಕ ಕಾರಣಗಳಿಂದ ನಡೆದಿದೆ. ಘಟನೆಗೆ ಯಾವುದೇ ಕೋಮು ಹಿನ್ನೆಲೆ ಇಲ್ಲ. ಆದ್ದರಿಂದ ಯಾರೂ ಸಹ ವದಂತಿಗಳನ್ನು ಹರಡಬಾರದು. ಗಾಯಗೊಂಡ ಮಂಜು ಕೊಳ ಅಪಾಯದಿಂದ ಪಾರಾಗಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ತಿಳಿಸಿದ್ದಾರೆ.

No Comments

Leave A Comment