ಅನರ್ಹ BPL ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಭರ್ಜರಿ ಶಾಕ್: 5 ತಿಂಗಳಲ್ಲಿ 15.12 ಲಕ್ಷ ಮಂದಿಗೆ ಆಘಾತ
ಬೆಂಗಳೂರು, ಮಾರ್ಚ್ 05: ಅನರ್ಹವಾಗಿ ಬಿಬಿಎಲ್ ಕಾರ್ಡ್ ಹೊಂದಿರುವವರ ವಿರುದ್ಧ ಸಮರ ಮುಂದುವರಿಸಿರುವ ರಾಜ್ಯ ಸರ್ಕಾರ ಕಳೆದ 5 ತಿಂಗಳಲ್ಲಿ 15.12 ಲಕ್ಷ ಮಂದಿಗೆ ಭಾರಿ ಆಘಾತ ನೀಡಿದೆ. ಅನರ್ಹರನ್ನು ಹೆಕ್ಕಿ ಹೆಕ್ಕಿ ಗುರುತಿಸಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಈ ಪೈಕಿ ಸುಮಾರು ಐದೂವರೆ ಸಾವಿರ ಬಿಪಿಎಲ್ ಕಾರ್ಡ್ಗಳನ್ನು ಶಾಶ್ವತವಾಗಿ ರದ್ದು ಮಾಡಿದೆ. 4 ಲಕ್ಷಕ್ಕೂ ಹೆಚ್ಚು ಕಾರ್ಡ್ಗಳನ್ನು ಬಿಪಿಎಲ್ನಿಂದ ಎಪಿಎಲ್ ಆಗಿ ಬದಲಾವಣೆ ಮಾಡಲಾಗಿದೆ. 23 ಸಾವಿರಕ್ಕೂ ಹೆಚ್ಚು ಪಡಿತರ ಚೀಟಿಗಳು ತಾತ್ಕಾಲಿಕವಾಗಿ ರದ್ದುಗೊಂಡಿರೋದು ಫಲಾನುಭವಿಗಳ ನಿದ್ದೆಗೆಡಿಸಿದೆ.
ಕಳೆದ 5 ತಿಂಗಳ ಕಾರ್ಯಾಚರಣೆ ಹೇಗಿದೆ?
-
ಬಿಪಿಎಲ್ನಿಂದ ಎಪಿಎಲ್ಗೆ ಪರಿವರ್ತನೆಗೊಂಡ ಕಾರ್ಡ್ಗಳು – 4.09 ಲಕ್ಷ (14,68,540 ಭಾದಿತರು)
-
ರದ್ದಾಗಿರುವ ಬಿಪಿಎಲ್ ಕಾರ್ಡ್ಗಳು – 5,632 (9,826 ಭಾದಿತರು)
-
ತಾತ್ಕಾಲಿಕವಾಗಿ ಅಮಾನತ್ತಾದ BPL ಕಾರ್ಡ್ಗಳು- 23,068 (34,617 ಭಾದಿತರು)