......ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಕರಾವಳಿಕಿರಣ ಡಾಟ್ ಕಾ೦ ವತಿಯಿ೦ದ "ಯುಗಾದಿ" ಹಬ್ಬದ ಹಾರ್ದಿಕ ಶುಭಾಶಯಗಳು......ಶತ್ರು ಸಂಪರ್ಕಿತ ಹಡಗುಗಳನ್ನು ಬಿಟ್ಟು ಎಲ್ಲರಿಗೂ ಹಾರ್ಮುಝ್ ಜಲಸಂಧಿ ಮುಕ್ತ: ಇರಾನ್...
ಬಳ್ಳಾರಿ ವಸತಿ ಶಾಲೆಯಲ್ಲಿ ಅಘಾತಕಾರಿ ಘಟನೆ: ಸಹಪಾಠಿಗಳ ಮೇಲೆ ವಿದ್ಯಾರ್ಥಿ ದಾಳಿ; ಓರ್ವ ಸಾವು, 7 ಮಂದಿ ಸ್ಥಿತಿ ಗಂಭೀರ
ಬಳ್ಳಾರಿ: ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್, ಚಾಕುವಿನಿಂದ ದಾಳಿ ಮಾಡಿದ್ದು, ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿ, 7 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಳ್ಳಾರಿ ನಗರದ “ಗುರುಕುಲ ವಸತಿ ಶಾಲೆ”ಯಲ್ಲಿ ಶನಿವಾರ ನಡೆದಿದೆ.
ಮೃತ ಬಾಲಕನನ್ನು ಆಂಧ್ರ ಪ್ರದೇಶದ ಅದವಾನಿಯ ಹೇಮಂತ್ ಎಂದು ಗುರುತಿಸಲಾಗಿದೆ. ಮೃತದೇಹವನ್ನು ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರಕ್ಕೆ (ವಿಮ್ಸ್) ಮರಣೋತ್ತರ ಪರೀಕ್ಷೆಗಾಗಿ ಕೊಂಡೊಯ್ಯಲಾಗಿದೆ. ಇವರೆಲ್ಲರೂ 9ನೆ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.
ರಾತ್ರಿ ಊಟದ ಬಳಿಕ ವಿದ್ಯಾರ್ಥಿಗಳು ಹಾಸ್ಟೆಲ್‌ನಲ್ಲಿ ಮಲಗಿದ್ದರು. ಈ ವೇಳೆ ಆರೋಪಿತ ವಿದ್ಯಾರ್ಥಿ ಮಂಚದ ರಾಡ್, ಸ್ಕ್ರೂ ಡ್ರೈವರ್ ಹಾಗೂ ರೇಡಿಯಮ್ ಕಟರ್, ಚಾಕುವಿನಿಂದ ಸಹಪಾಠಿಗಳ ಮೇಲೆ ದಾಳಿ ನಡೆಸಿದ್ದಾನೆ ಎನ್ನಲಾಗಿದೆ.
ಬಾಲಕನ ಈ ಹುಚ್ಚಾಟದಿಂದಾಗಿ 8 ಬಾಲಕರಿಗೆ ಗಂಭೀರ ಗಾಯಗೊಂಡಿದ್ದು, ಬಳ್ಳಾರಿ ಬಿಮ್ಸ್ ಮತ್ತು ಟ್ರಾಮಕೇರ್ ಆಸ್ಪತ್ರೆಗೆ ವಿದ್ಯಾರ್ಥಿಗಳನ್ನು ದಾಖಲು ಮಾಡಲಾಗಿದೆ. ಇದೀಗ ಬಾಲಕನೋರ್ವ ಮೃತಪಟ್ಟಿದ್ದಾನೆ. ಗಾಯಗೊಂಡಿರುವ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಹಾಸ್ಟೆಲ್‌ನ ವಾರ್ಡನ್ ಮೇಲೂ ಬಾಲಕ ಹಲ್ಲೆ ಮಾಡಿದ್ದು ,ಹಲ್ಲೆಯ ಬಳಿಕ ಆತ ಓಡಿ ಹೋಗಿದ್ದಾನೆ ಎನ್ನಲಾಗಿದೆ.
ತಡರಾತ್ರಿ ಈ ಘಟನೆ ನಡೆದಿದ್ದು, ಮಕ್ಕಳ ಪೋಷಕರನ್ನು ಈ ಘಟನೆ ಬೆಚ್ಚಿ ಬೀಳಿಸಿದೆ. ತಡಿಯ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.