....ನಾಡಿನ ಎಲ್ಲೆಡೆಯಲ್ಲಿ ಇ೦ದಿನಿ೦ದ (ಭಾನುವಾರದಿ೦ದ)ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ...16ರ೦ದು ಶ್ರೀಶಾರದಾ ಪೂಜೆ...

ಕಟಪಾಡಿಯಲ್ಲಿ ಗ್ಯಾಸ್ ಟ್ಯಾಂಕರ್‌ ಪಲ್ಟಿ; ಆತಂಕದ ವಾತಾವರಣ-ರಾತ್ರೆಯ ವರೆಗೆ ಬದಲಿ ಮಾರ್ಗ-ವಿದ್ಯುತ್ ನಿಲುಗಡೆ…

ಉಡುಪಿ: ಗ್ಯಾಸ್ ತುಂಬಿದ ಬುಲೆಟ್ ಟ್ಯಾಂಕರೊಂದು ಕಟಪಾಡಿ ಸಮೀಪದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಪಲ್ಟಿಯಾದ ಘಟನೆ ಇಂದು ಬೆಳಗ್ಗೆ ನಡೆದಿದೆ.

ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು ಅಗ್ನಿಶಾಮಕ ದಳದವರು ನಿರಂತರ ನೀರು ಹಾಯಿಸುವ ಮೂಲಕ ಪರಿಸ್ಥಿತಿಯನ್ನು ನಿಯಂತ್ರಣದಲ್ಲಿರಿಸಿದ್ದಾರೆ.

ಮಂಗಳೂರಿನಿಂದ ಉಡುಪಿ ಕಡೆ ಹೋಗುತ್ತಿದ್ದ ಗ್ಯಾಸ್ ತುಂಬಿದ ಬುಲೆಟ್ ಟ್ಯಾಂಕರ್ ಕಟಪಾಡಿ ಜಂಕ್ಷನ್ ನಲ್ಲಿ ಪಲ್ಟಿಯಾಗಿದೆ ಎನ್ನಲಾಗಿದೆ. ಕಟಪಾಡಿ ಜಂಕ್ಷನ್ ನಲ್ಲಿ ನಡೆಯುತ್ತಿರುವ ಅಂಡರ್ ಪಾಸ್ ಕಾಮಗಾರಿಗಾಗಿ ರಸ್ತೆಯನ್ನು ಡೈವರ್ಶನ್ ಮಾಡಲಾಗಿತ್ತು. ಈ ತಿರುವಿನಲ್ಲಿ ವೇಗದಿಂದ ಬಂದ ಟ್ಯಾಂಕರ್‌ ಅನ್ನು ಚಾಲಕ ಒಮ್ಮೆಲೆ ತಿರುಗಿಸಿದ ಪರಿಣಾಮ ಪಲ್ಟಿ ಆಯಿತೆಂದು ತಿಳಿದು ಬಂದಿದೆ.

ಸ್ಥಳದಲ್ಲಿ ಪೊಲೀಸರು ಹಾಗೂ ಅಗ್ನಿಶಾಮಕದ ಅಧಿಕಾರಿಗಳು ಹಾಜರಿದ್ದಾರೆ. ಇದರಿಂದ ಒಂದು ಗಂಟೆಗಳ ಕಾಲ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು.

 

 

No Comments

Leave A Comment